Home ಜಿಲ್ಲೆ ಕಲಬುರಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಚಿತ್ತಾಪುರ; ಪಟ್ಟಣದ ಪ್ರಜಾಸೌಧದ ಆವರಣದಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೆಳೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು,
ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಧೈರ್ಯ, ಸಾಹಸ ಮತ್ತು ಶೌರ್ಯಕ್ಕೆ ಹೆಸರಾದ ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಹಾಗೂ ಹೋರಾಟವನ್ನು ನಡೆಸಿದ ವೀರ ವನಿತೆಯಾಗಿದ್ದಾರೆ. ಬ್ರೀಟಿಷರ ವಿರುದ್ಧ ಹೋರಾಡಿ ನಾಡಿನ ಸ್ವಾಭಿಮಾನ ಮತ್ತು ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಅವರ ಆದರ್ಶಗಳು ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಿವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.