Home ಜಿಲ್ಲೆ ಎಸ್.ಎಸ್. ವಿದ್ಯಾಸಂಸ್ಥೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಎಸ್.ಎಸ್. ವಿದ್ಯಾಸಂಸ್ಥೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ತಾಳಿಕೋಟೆ, ಪಟ್ಟಣದ ಶ್ರೀ ಎಸ್.ಎಸ್. ವಿದ್ಯಾಸಂಸ್ಥೆಯಲ್ಲಿ ಸೋಮವಾರರಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಎಚ್.ಎಸ್. ಪಾಟೀಲ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಚಿನ್ ಪಾಟೀಲ, ಬಿ.ಪಿ.ಎಡ್. ಕಾಲೇಜಿನ ಪ್ರಾಚಾರ್ಯ ಶಿವಕುಮಾರ ನಾಯಕ, ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಬಿ. ನಡುವಿನಕೇರಿ, ಪಿಯು ಕಾಲೇಜಿನ ಎಸ್.ಬಿ. ಮಂಗ್ಯಾಳ, ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಬಿ.ಆರ್. ಹಿರೇಹೊಳಿ, ಎಸ್.ಸಿ. ಗುಡಗುಂಟಿ, ಎಚ್.ಬಿ. ಪಾಟೀಲ, ಎಂ.ಎಸ್. ರಾಯಗೊಂಡ, ಶರಣು ಬಿರಾದಾರ ಸೇರಿದಂತೆ ಸಂಸ್ಥೆಯ ಸಮಸ್ತ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.