Home ಜಿಲ್ಲೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ: ನಗರದ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಇಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಮಹರ್ಷಿ ವಾಲ್ಮೀಕಿಯವರ ಆದರ್ಶಗಳು, ತತ್ವಗಳು ಹಾಗೂ ಅವರು ರಚಿಸಿದ ಮಹಾಕಾವ್ಯ ರಾಮಾಯಣದ ಮೂಲಕ ಸಾರಲಾದ ಸತ್ಯ, ಧರ್ಮ, ನ್ಯಾಯ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸ್ಮರಿಸಲಾಯಿತು. ಸಮಾಜಕ್ಕೆ ನೈತಿಕತೆ, ಸನ್ನಡತೆ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಪ್ರತಿಯೊಬ್ಬರಿಗೂ ಸದಾ ಪ್ರೇರಣೆಯಾಗಲಿ ಎಂಬ ಆಶಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ಸಮಸ್ತ ಜನತೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳನ್ನು ತಿಳಿಸಲಾಯಿತು.