
ಯಾದಗಿರಿ: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರು ಸೇರಿದಂತೆ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದು, ಮಹರ್ಷಿ ವಾಲ್ಮೀಕಿಯವರ ಸ್ಮರಣೆಗೆ ಗೌರವ ಸಲ್ಲಿಸಿದರು.


























