Home ಜಿಲ್ಲೆ ಕಲಬುರಗಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

ಕಲಬುರಗಿ,ಆ.29-ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣದ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ್ ಅಷ್ಟಗಿ ಅವರು, ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಕ್ರೀಡಾಪಟುಗಳಿಗೆ ಶುಭವನ್ನು ಕೋರಿದರು ಹಾಗೂ “ಏಕ್ ಗಂಟಾ ಖೇಲ್ ಮೈದಾನಮೆ”-ಎಂಬ ಕೇಂದ್ರ ಸರ್ಕಾರದ ಘೋಷಣೆಯಂತೆ ಸರ್ವರು ಪ್ರತಿ ದಿನ ಒಂದು ಗಂಟೆಯ ಕಾಲ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಲು ವಿನಂತಿಸಿದರು. ಈ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಇಲಾಖೆಯ ತರಬೇತಿದಾರರಾದ ಸಂಜಯ್ ಬಾಣದ, ರಾಜು ಚವ್ಹಾಣ, ಪ್ರವೀಣ್ ಪುಣೆ, ರಾಜು, ಸಂತೋಷ್ ಬಾವಿಮನಿ, ಸ್ಟೀಫನ್, ಶ್ರೀರಾಜ ಹಾಗೂ ಸಿಬ್ಬಂದಿ ವರ್ಗದವರು ಕ್ರೀಡಾಪಟುಗಳು ಹಿರಿಯ ನಾಗರಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಬೆಯನ್ನು ತಂದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳ್ಳಿಗೆ ಹಾಗೂ ಪುರುಷ ಮಹಿಳೆಯಾರಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗೆ 100 ಮೀಟರ್ 200 ಮೀಟರ್ 1600 ಮೀಟರ್ ಓಟದ ಸ್ಪರ್ಧೆಗಳನ್ನು ಹಾಗೂ ಶಾಲಾ ಬಾಲಕರಿಗೆ ಹಾಕಿ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಮೆಡಿಸನ್ ನೀಡಲಾಯಿತು.