
ಬೀದರ್ ಜು 30: ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಮಹಾಪುರುಷರ ಸ್ಮರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ್ ಶಿಂಧೆ, ಬೀದರ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷರಾದ ದತ್ತಾತ್ರೇಯ ಬಾಂದೇಕರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಪ್ರಮುಖ ಮುಖಂಡರು ಭಾಗವಹಿಸಿ ಜಯಂತಿ ಆಚರಣೆಗೆ ಗೌರವ ಸಲ್ಲಿಸಿದರು.






























