ಕಲಬುರಗಿ:ಅ.8: ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಚನ್ನಾರಡ್ಡಿ ಪಾಟೀಲ ಅವರು ಮಾತನಾಡುತ್ತ, ಮಹರ್ಷಿ ವಾಲ್ಮೀಕಿ ಅವರ ಅತ್ಯಂತ ಪ್ರಸಿದ್ಧ ಕೃತಿ ರಾಮಾಯಣವು ವಿಶ್ವದ ಮೊದಲ ಮಹಾಕಾವ್ಯವಾಗಿದೆ. ವಿದ್ಯಾರ್ಥಿಗಳು ಅದನ್ನು ಓದಿ ಅರ್ಥಮಾಡಿಕೊಂಡು ಆದರ್ಶ ಮಾರ್ಗದಲ್ಲಿ ನಡೆದು ಉತ್ತಮವಾದ ಭವಿಷ್ಯ ರೂಪಿಸಿಕೊಳ್ಳಬೇಕು. ಸಂಸ್ಕಾರ-ಸಂಸ್ಕøತಿ-ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಮಹರ್ಷಿ ವಾಲ್ಮೀಕಿಯವರ ಜೀವನವನ್ನು ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಶ್ರೀ ಪ್ರಶಾಂತ ಕುಲಕರ್ಣಿ, ಶ್ರೀಮತಿ ವಿನುತಾ ಆರ್.ಬಿ., ಶ್ರೀ ಪ್ರಭುಗೌಡ ಸಿದ್ಧಾರೆಡ್ಡಿ, ಶ್ರೀ ಕರುಣೇಶ್ ಹಿರೇಮಠ, ಶ್ರೀ ಗುರುರಾಜ ಕುಲಕರ್ಣಿ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

























