Home ಜಿಲ್ಲೆ ಬೆಂಗಳೂರು ಬಿಜೆಪಿ ಗೆಲುವಿಗೆ ಸಂಭ್ರಮಾರಣೆ

ಬಿಜೆಪಿ ಗೆಲುವಿಗೆ ಸಂಭ್ರಮಾರಣೆ

ಚಿಕ್ಕಬಳ್ಳಾಪುರ: ಮೇ.೦೬– ಪಶ್ಚಿಮ ಬಂಗಾಳ,ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿದ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮಂಗಳವಾರ ಚಿಕ್ಕಬಳ್ಳಾಪುರದ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಸಂಭ್ರಮಾಚರಣೆ ನಡೆಯಿತು ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಿದರು.


ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೀಕಲ್ ರಾಮಚಂದ್ರಗೌಡ ಮೂರು ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿದ ಭರ್ಜರಿ ಗೆಲುವು ದೇಶದ ರಾಜಕೀಯದಲ್ಲಿ ಹೊಸ ದಿಕ್ಕನ್ನು ಸೂಚಿಸುತ್ತದೆ ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಗೂ ಮೀರಿ ಪಕ್ಷ ಗೆಲುವು ಸಾಧಿಸಿರುವುದು ಗಮನಾರ್ಹವಾಗಿದೆ.ಬಂಗಾಳದ ಜನರು ಈ ಬಾರಿ ಧೈರ್ಯದಿಂದ ಮುಂದೆ ಬಂದು ಸ್ಪಷ್ಟ ನಿರ್ಧಾರ ಕೈಗೊಂಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಐತಿಹಾಸಿಕ ಜನಾದೇಶ ನೀಡಿದ್ದಾರೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಅವರು ಮಾತನಾಡಿ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ಸುದೀರ್ಘ ಜನಸೇವೆ ರಾಜಕೀಯ ಜೀವನದ ಅಂಗವಾಗಿ ಇದೇ ತಿಂಗಳ ೯ರಂದು ಚಿತ್ರದುರ್ಗದಲ್ಲಿ ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.


ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜು, ಚಿಂತಾಮಣಿ ವೇಣುಗೋಪಾಲ್,ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಮುರಳಿದಾರ್,ಮಧು ಸೂರ್ಯನಾರಾಯಣ ರೆಡ್ಡಿ ,ಜಿಲ್ಲಾ ಕಾರ್ಯದರ್ಶಿ ಅಶೋಕ್,ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮೀನಾರಾಯಣ ಗುಪ್ತ,ರಾಜ್ಯ ಪರಿಷತ್ ಸದಸ್ಯ ಬೈರೇಗೌಡ,ಜಿಲ್ಲಾ ಮಾಧ್ಯಮ ಸಂಚಾಲಕ ವಿ.ಮದು ಚಂದ್ರ ಮಂಡಲದ ಅಧ್ಯಕ್ಷ ಪ್ರಭಾಕರ್ ರೆಡ್ಡಿ,ತೇಜೇಂದ್ರ ಪಾಪು,ಸೀಕಲ್ ಆನಂದ್ ಗೌಡ,ಕೋಡಿರ್ಲಪ್ಪ,ವೇಣು ಮಾಧವ್,ನರಸಿಂಹರಾಜು, ಗೋವಿಂದರಾಜು,ದೇವರಾಜ್,ಚಿಕ್ಕಬಳ್ಳಾಪುರ ನಗರ ಉಪಾಧ್ಯಕ್ಷ ಶಶಿಧರ್,ಮಹಿಳಾ ಮೋರ್ಚ ಉಪಾಧ್ಯಕ್ಷರಾದ ಸುಮಿತ್ರ,ನರಸಪ್ಪ,ಕೊಂಡಪ್ಪ,ಅಜಯ್ ಪಾಲ್ ಸಿಂಗ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಂಡಲದ ಪದಾಧಿಕಾರಿಗಳು ಭಾಗವಹಿಸಿದ್ದರು.