Home ಜಿಲ್ಲೆ ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಸಂಜೆವಾಣಿ ವಾರ್ತೆ,
ವಿಜಯಪುರ, ನ. ೩: ನಗರದ ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ೭೧ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ವಿಜೃಂಭಣೆಯಿAದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಸರಾ ಬೇಗಂ ಚಪ್ಪರಬಂದ ಹಾಗೂ ರಾಜು ಹಿಪ್ಪರಗಿ, ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ನಾಡಿನ ಅಸ್ಮಿತೆ ಹಾಗೂ ಸಂಸ್ಕೃತಿಯ ಪ್ರತೀಕವಾಗಿದೆ. ಕನ್ನಡದ ಉಳಿವು, ಬೆಳವಣಿಗೆ ಮತ್ತು ಪ್ರಸಾರಕ್ಕಾಗಿ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಎಸ್. ಖಾದ್ರಿ ಇನಾಂದಾರ ಸ್ವಾಗತಿಸಿದರು. ಕೊನೆಯಲ್ಲಿ ವಂದಿಸಿದರು.
ಈ ಸಂದರ್ಭದಲ್ಲಿ ರೈತ ಘಟಕದ ಅಧ್ಯಕ್ಷ ಸಿದ್ದನಗೌಡ ಪಾಟೀಲ, ರಾಜು ಹಿಪ್ಪರಗಿ, ಸಂಜು ಹಿರೇಮಠ, ವೀರೇಂದ್ರ ಪಾಟೀಲ, ಕೋರ್ ಕಮಿಟಿ ಸದಸ್ಯರಾದ ಪರಶುರಾಮ ರೋಣಿಹಾಳ, ಹನುಮಂತ ತಲಕೇರಿ, ಮಲ್ಲು ತೊರವಿ, ಚೆನ್ನೈಗಾಮಿ, ಶಾಂತಾಬಾಯಿ ನಾಯಕ್, ರಾಜು ರಜಪೂತ, ಶಿವಲಿಂಗ, ವಸಂತ ರಾಥೋಡ್, ಬಸಿರಾ ಮನಿಯರ್, ಬಾಬು ಶಿರಣಗಾರ ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.