
ಸೇಡಂ,ನ,12: ಈರುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಟ್ರಕ್ ಹಾಗೂ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದ್ದು, ಇಬ್ಬರು ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬೀರನಳ್ಳಿ ಕ್ರಾಸ್ ಬಳಿ ನಿನ್ನೆ ರಾತ್ರಿ ನಡೆದಿದೆ.ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಟ್ರಕ್ನಲ್ಲಿದ್ದ ಈರುಳ್ಳಿ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಚಾಲಕರನ್ನು ಸಾರ್ವಜನಿಕರ ಸಹಕಾರದೊಂದಿಗೆ ತಕ್ಷಣವೇ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯ ಪೆÇಲೀಸ್ ಠಾಣೆಯ ಸಿಬ್ಬಂದಿಗಳು ಸಂಜೆವಾಣಿಗೆ ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕಲಬುರಗಿ ಸೇಡಂ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ ರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿಯನ್ನು ಕಂಡು ಮಳಖೇಡ ಪೆÇಲೀಸ್ ಠಾಣೆ ಸಿಬ್ಬಂದಿ ವರ್ಗದವರು ತಕ್ಷಣ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.





















