
ಕಲಬುರಗಿ,ಫೆ.18: ಭಾರತ ಜನಗಣತಿ-2027ರ ಸಿದ್ಧತೆಗಳ ಭಾಗವಾಗಿ ರಾಜ್ಯದಲ್ಲಿ ಜನಗಣತಿ ಕಾರ್ಯಕ್ಕೆ ಪೂರ್ವಸಿದ್ದತೆ ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಮೊದಲ ಹಂತವಾಗಿ ಮನೆಪಟ್ಟಿ ಮತ್ತು ಗೃಹ ಗಣತಿ ಕಾರ್ಯ (Houselisting and Housing Census) ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಮನೆ ಮನೆ ಗಣತಿ ಕಾರ್ಯ ಮುನ್ನ ಏಪ್ರಿಲ್ 1 ರಿಂದ 15 ರವರೆಗೆ ಜಿಲ್ಲೆಯ ನಾಗರಿಕರಿಗೆ ಸ್ವಯಂ-ಗಣತಿ (Self Enumeration) ಮಾಡಲು ಅವಕಾಶ ನೀಡಲಾಗಿದೆ. ಇನ್ನು ಎರಡನೇ ಹಂತವಾಗಿ ಜನಸಂಖ್ಯೆ ಗಣತಿ ಕಾರ್ಯ 2027 ಫೆಬ್ರವರಿಯಲ್ಲಿ ನಡೆಯಲಿದೆ ಎಂದಿದ್ದಾರೆ.
ಜನಗಣತಿ ಎಂದರೆ ದೇಶದಲ್ಲಿರುವ ಪ್ರತಿಯೊಂದು ಮನೆ ಮತ್ತು ಪ್ರತಿಯೊಬ್ಬ ವ್ಯಕ್ತಿಯ ಕುರಿತು ಜನಸಂಖ್ಯೆ, ಸಾಮಾಜಿಕ ಮತ್ತು ಆರ್ಥಿಕ ಮಾಹಿತಿಯನ್ನು ಸಂಗ್ರಹಿಸುವ ಅಧಿಕೃತ ಪ್ರಕ್ರಿಯೆಯಾಗಿದೆ. ಈ ಜನಗಣತಿಯಲ್ಲಿ ಮೊದಲ ಬಾರಿಗೆ ಡಿಜಿಟಲ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಗಣತಿಗಾರರು ಮೊಬೈಲ್ ಆಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ನಾಗರಿಕರು ವೆಬ್ ಪೆÇೀರ್ಟಲ್ ಮೂಲಕ ಸ್ವಯಂ ಮಾಹಿತಿಯನ್ನು ಸಲ್ಲಿಸುವ ವ್ಯವಸ್ಥೆಯೂ ಇರಲಿದೆ. ಗಣತಿಯಲ್ಲಿ ಸಂಗ್ರಹವಾಗುವ ಮಾಹಿತಿಗೆ ಭದ್ರತೆ ನೀಡಲು ಬಹು ಹಂತದ ಸುರಕ್ಷತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಜನಗಣತಿ ಕಾರ್ಯವು ದೇಶದ ಅಭಿವೃದ್ಧಿ ಯೋಜನೆಗಳು, ನೀತಿ-ನಿರೂಪಣೆ, ಕಲ್ಯಾಣ ಕಾರ್ಯಕ್ರಮಗಳು ಮತ್ತು ಆಡಳಿತಾತ್ಮಕ ಯೋಜನೆಗಳ ರೂಪುರೇμÉ ತಯಾರಿಸಲು ಅತ್ಯಂತ ಮಹತ್ವದ್ದು. ಸಾರ್ವಜನಿಕರು ಗಣತಿಗಾರರಿಗೆ ಸಹಕರಿಸುವ ಮೂಲಕ ಜನಗಣತಿ-2027 ಕಾರ್ಯ ಯಶಸ್ವಿಗೊಳಿಸಬೇಕು ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.



























