
ಕಲಬುರಗಿ,ಏ.18: ವೃತ್ತಿ ಶಿಕ್ಷಣ ಪ್ರವೇಶಾತಿಗೆ ಇದೇ ಏಪ್ರಿಲ್ 23 ಮತ್ತು 24 ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನದ ಅವಧಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಲಬುರಗಿ ನಗರದ 35 ಕೇಂದ್ರಗಳಲ್ಲಿ ಸಿ.ಇ.ಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚನೆ ನೀಡಿದರು.
ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಎಲ್ಲಿಯೂ ನಕಲಿಗೆ ಅವಕಾಶ ನೀಡದಂತೆ ತೀವ್ರ ಕಟ್ಟೆಚ್ಚರ ವಹಿಸಿವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸುಮಾರು 14,405 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಂದ್ರದ ವೀಕ್ಷಕರನ್ನಾಗಿ ನೇಮಿಸಿದ್ದು, ಅರ್ಧ ಗಂಟೆ ಮುಂಚೆಯೆ ವೀಕ್ಷಕರು ಕೇಂದ್ರದಲ್ಲಿ ಹಾಜರಾಗಿ ನ್ಯಾಯಸಮ್ಮತ ಪರೀಕ್ಷೆ ನಡೆಯುವಂತೆ ಮೇಲುಸ್ತುವಾರಿ ವಹಿಸಬೇಕು ಎಂದರು.
ಪರೀಕ್ಷೆ ದಿನದ ಮುನ್ನವೆ ಕೇಂದ್ರದಲ್ಲಿ ಆಸನ ವ್ಯವಸ್ಥೆ, ವಿದ್ಯುತ್ ,ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕು. ಪ್ರವೇಶ ದ್ವಾರದಲ್ಲಿಯೆ ಪೆÇಲೀಸ್ ಸಿಬ್ಬಂದಿ ಸಹಾಯ ಪಡೆದು ಅಭ್ಯರ್ಥಿಗಳಿಗೆ ಫ್ರಿಸ್ಕಿಂಗ್ ಮಾಡಬೇಕು. ಪ್ರಿಸ್ಕಿಂಗ್ ಸಮಯದಲ್ಲಿ ಅಭ್ಯರ್ಥಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ಎಂದ ಅವರು, ಇನ್ನು ಪರೀಕ್ಷಾ ಕೇಂದ್ರಕ್ಕೆ ಬರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಐ.ಡಿ ಕಾರ್ಡ್ ತರುವುದನ್ನು ಮರೆಯಬಾರದು ಎಂದಿದ್ದಾರೆ.
ಪರೀಕ್ಷೆಯು ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ನಡೆಯಲಿದೆ. ಇದಕ್ಕಾಗಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ ಕ್ಯಾಮೆರಾ ಅಲವಡಿಸಲಾಗುತ್ತಿದೆ. ಇನ್ನು ಕೇಂದ್ರಗಳ ಮೇಲೆ ನಿಗಾ ವಹಿಸಲು ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ತಂಡಗಳು ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಿವೆ. ಎಲ್ಲಿಯೇ ಅಕ್ರಮ ನಡೆದಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ಮೊಬೈಲ್ ನಿμÉೀಧ: ಪರೀಕ್ಷೆ ಕೇಂದ್ರದಲ್ಲಿ ಮೋಬೈಲ್, ಬ್ಲೂಟೂಥ್, ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಸಂಪೂರ್ಣವಾಗಿ ನಿμÉೀಧಿಸಲಾಗಿದೆ. ಇದಲ್ಲದೆ ಕೇಂದ್ರದಲ್ಲಿ 200 ಮೀಟರ್ ಸುತ್ತ ಪ್ರದೇಶ ನಿμÉೀಧಿತ ಪ್ರದೇಶವೆಂದು ಈಗಾಗಲೆ ಘೋಷಿಸಲಾಗಿದ್ದರಿಂದ ಪೆÇಲೀಸ್ ಇಲಾಖೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಸುರೇಶ ಅಕ್ಕಣ್ಣ ಸೇರಿದಂತೆ ಇತರೆ ಅಧಿಕಾರಿಗಳು, ಪರೀಕ್ಷೆ ಕೇಂದ್ರದ ಮುಖ್ಯಸ್ಥರು ಭಾಗವಹಿಸಿದ್ದರು.

























