
ಕೋಲಾರ:- ನಗರದ ನಿಮಾತೃ ಟಿ ಚನ್ನಯ್ಯ ಅವರ ಪುತ್ಥಳಿ ಹಾಗೂ ಟಿ.ಚನ್ನಯ್ಯ ರಂಗಮಂದಿರದ ಅಭಿವೃದ್ದಿ ಕಾರ್ಯವನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ವೀಕ್ಷಣೆ ನಡೆಸಿದರು.
ನಗರದ ಟಿ ಚನ್ನಯ್ಯ ರಂಗಮಂದಿರದ ಆವರಣದಲ್ಲಿ ಕೋಲಾರ ನಗರದ ನಿಮಾತೃ ಹಾಗೂ ಕೋಲಾರದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ಗಾಂಧಿವಾದಿ ಮತ್ತು ಸಂವಿಧಾನ ಸಭೆಯ ಸದಸ್ಯರಾಗಿದ್ದರು. ದಲಿತ ಕುಟುಂಬದಲ್ಲಿ ಜನಿಸಿ ವಿದುರಾಶ್ವತ್ಥ ಹೋರಾಟದಲ್ಲಿ ಪಾಲ್ಗೊಂಡು ಕೆಂಗಲ್ ಹನುಮಂತಯ್ಯನವರ ಸಂಪುಟದಲ್ಲಿ ಸಚಿವರಾಗಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದರು. ಇವರು ಸಂವಿಧಾನ ಸಭೆಯಲ್ಲಿ ಕನ್ನಡದಲ್ಲಿ ಮಾತನಾಡಲು ಒತ್ತಾಯಿಸಿದ್ದಕ್ಕಾಗಿ ಹೆಸರುವಾಸಿಯಾಗಿದ್ದರು ಇಂತಹ ಮಹನೀಯರ ಪುತ್ಥಳಿ ಅನಾವರಣ ಗೊಳಿಸಲು ಸಿದ್ದವಿದೆ ಇಂತಹ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ ಎಂದರು.
ಈಗಾಗಲೇ ಪುತ್ಥಳಿ ಕಾರ್ಯ ಸೇರಿದಂತೆ ಇತರರ ಅಭಿವೃದ್ದಿ ಕಾರ್ಯಕ್ರಮ ಪೂರ್ಣಗೊಳಿಸಿ ಅಭಿವೃದ್ಧಿ ಕಾರ್ಯವನ್ಮು ಚುರುಕುಗೊಳಿಸಿ ಕಿಂಚಿತ್ತು ಲೋಪವಾಗದಂತೆ ಉದ್ಘಾಟನಾ ಕಾರ್ಯಕ್ರಮ ನಡೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೀರೇಂದ್ರ ಪಾಟೀಲ್, ರಾಮಸಂದ್ರ ಕುಮಾರ್ ಮುಂತಾದವರು ಇದ್ದರು.





























