ಚಿದಂಬರ ಶಿಕ್ಷಣ ಸಂಸ್ಥೆ: ಸಂಭ್ರಮದ ರಾಜ್ಯೋತ್ಸವ ಆಚರಣೆ

ಬೀದರ್:ನ.2: ಇಲ್ಲಿಯ ಗುಂಪಾದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಕನ್ನಡ ಭಾಷೆ ಕನ್ನಡಿಗರ ಪ್ರಥಮ ಆದ್ಯತೆಯಾಗಬೇಕು. ಎಲ್ಲರೂ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಬಿ.ಜಿ. ಶೆಟಕಾರ್ ಹೇಳಿದರು.
ಕನ್ನಡ ಮಾಧ್ಯಮದಲ್ಲಿ ಓದಿದ ಅನೇಕರು ವಿಶ್ವಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕನ್ನಡ ಅನ್ನ ಕೊಡುವ ಭಾಷೆಯಾಗಿದೆ ಎಂದು ತಿಳಿಸಿದರು.
ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ ಹಾಗೂ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ವಿದ್ಯಾರ್ಥಿನಿಯರಿಂದ ನಡೆದ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆದವು.
ಸಂಸ್ಥೆಯ ನಿರ್ದೇಶಕ ಸಹಜಾನಂದ ಕಂದಗೂಳೆ, ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಎನ್.ಕೆ. ಜಾಬಶಟ್ಟಿ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ. ಚಂದ್ರಕಾಂತ ಹಳ್ಳಿ, ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪೆÇ್ರ. ಆರ್.ವಿ. ಗಂಗಶೆಟ್ಟಿ, ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ಶ್ರೀ ಶಿವಕುಮಾರೇಶ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ, ಸಿದ್ಧಾರೂಢ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕ ಅಂಜು ಪ್ರಾಜೇಶ್ ಮತ್ತಿತರರು ಇದ್ದರು. ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಸ್ವಾಗತಿಸಿದರು. ಶಿಕ್ಷಕ ನಾಗನಾಥ ಬಿರಾದಾರ ನಿರೂಪಿಸಿದರು. ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ವಂದಿಸಿದರು.
ಸಂಸ್ಥೆಯ ಸಂಚಾಲಿತ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ, ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಹಾಗೂ ಸಂಸ್ಥೆಯ ಇತರ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.