Home ಜಿಲ್ಲೆ ಮುಖ್ಯಮಂತ್ರಿ ಜಿಲ್ಲೆಗೆ ಬೃಹತ್ ಕೈಗಾರಿಕೆ ಘೋಷಿಸಲಿ

ಮುಖ್ಯಮಂತ್ರಿ ಜಿಲ್ಲೆಗೆ ಬೃಹತ್ ಕೈಗಾರಿಕೆ ಘೋಷಿಸಲಿ

ಬೀದರ್: ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಜುಲೈ ೬ ರಂದು ಬೀದರಗೆ ಆಗಮಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆ ಸ್ಥಾಪಿಸುವ ಘೋಷಣೆ ಮಾಡಬೇಕು ಎಂದು ಯುವ ಕೈಗಾರಿಕೋದ್ಯಮಿ ಪೃಥ್ವಿರಾಜ್ ಎಸ್. ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ನಿರುದ್ಯೋಗಿಗಳು ಇದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸುವ ಬೃಹತ್ ಕೈಗಾರಿಕೆ ಸ್ಥಾಪನೆ ಬಹಳ ಅಗತ್ಯವಿದೆ ಎಂದು ಹೇಳಿದ್ದಾರೆ.
ಕಲಬುರಗಿಯಲ್ಲಿ ಈಗಾಗಲೇ ರೂ. ೭೦೦ ಕೋಟಿ ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಬೀದರನಲ್ಲಿ ಎಸ್.ಇ.ಝಡ್ ಹಾಗೂ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಕೈಗಾರಿಕೆ ನೀತಿ ಜಾರಿಗೊಳಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.