Home ಜಿಲ್ಲೆ ಬೆಂಗಳೂರು ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ

ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ

ಕೋಲಾರ,ಸೆ,೭- ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ಹಾಗೂ ಶಿಕ್ಷಕರ ಪಾತ್ರ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಂಓಇಏಂಐ ಖಇಂಆ ಅಇಓಖಿಖಇ, (ಅಂಕೆಲ್ ರೀಡ್ ಸೆಂಟರ್) ಬೆಂಗಳೂರು-ಕೋಲಾರ ಜಿಲ್ಲೆ ವತಿಯಿಂದ ಇಂದು ಸೆಪ್ಟೆಂಬರ್ ೫, ೨೦೨೬ರಂದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಂಚಾಳ ಗೇಟ್‌ನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಹಿರಿಯ ಪ್ರಾಥಮಿಕ/ಪ್ರೌಢ ಶಾಲೆಯಲ್ಲಿ ಬಾಲ್ಯವಿವಾಹದ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ರೀಡ್ ಸಂಸ್ಥೆಯ ಸಂಯೋಜಕರಾದ ಶಿಲ್ಪಾ ಹಾಗೂ ಸಿಬ್ಬಂದಿಗಳಾದ ನಾಗಪ್ಪ ಮತ್ತು ಪ್ರಭಾವತಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಸಮುದಾಯಕ್ಕೆ ಬಾಲ್ಯವಿವಾಹದಿಂದ ಉಂಟಾಗುವ ಸಾಮಾಜಿಕ, ಶೈಕ್ಷಣಿಕ ಮತ್ತು ಕಾನೂನು ಸಂಬಂಧಿತ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.


ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ, ಸುರಕ್ಷತೆ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ, ಅದನ್ನು ತಡೆಗಟ್ಟುವಲ್ಲಿ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಲಾಯಿತು.


ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಮಕ್ಕಳನ್ನು ರಕ್ಷಿಸುವಂತೆ ಜಾಗೃತಿ ಮೂಡಿಸಲಾಯಿತು.


ಕಾರ್ಯಕ್ರಮದ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಪಾಪಣ್ಣ ಹಾಗೂ ಸತೀಶ್ ಅವರು ಬಾಲ್ಯವಿವಾಹ ನಿರ್ಮೂಲನೆ ಹಾಗೂ ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಗಾಗಿ ನೀಡುತ್ತಿರುವ ಸಹಕಾರವನ್ನು ಗುರುತಿಸಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ರೀಡ್ ಸಂಸ್ಥೆಯ ಪ್ರತಿನಿಧಿಗಳು, ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಕೇವಲ ಕಾನೂನು ಮಾತ್ರ ಸಾಕಾಗುವುದಿಲ್ಲ. ಪ್ರತಿಯೊಬ್ಬ ಶಿಕ್ಷಕರು, ಪೋಷಕರು ಮತ್ತು ಸಮುದಾಯದ ಸದಸ್ಯರು ಜಾಗೃತರಾಗಬೇಕು. ಮಕ್ಕಳಿಗೆ ಶಿಕ್ಷಣದ ಅವಕಾಶವನ್ನು ಖಚಿತಪಡಿಸಿ, ಅವರ ಬಾಲ್ಯವನ್ನು ಸುರಕ್ಷಿತವಾಗಿರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದ ಮೂಲಕ ಬಾಲ್ಯವಿವಾಹ ತಡೆಯೋಣ ಮಕ್ಕಳ ಭವಿಷ್ಯ ಉಳಿಸೋಣ ಎಂಬ ಸಂದೇಶವನ್ನು ನೀಡಲಾಯಿತು.


ಕಾರ್ಯಕ್ರಮದ ಉದ್ದೇಶ:ಮಕ್ಕಳಲ್ಲಿ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು, ಶಿಕ್ಷಕರು ಮತ್ತು ಸಮುದಾಯವನ್ನು ಬಾಲ್ಯವಿವಾಹ ತಡೆಗಟ್ಟುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ಹಾಗೂ ಬಾಲ್ಯವಿವಾಹ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸುವುದು ಮುಖ್ಯ ಉದ್ದೇಶವಾಗಿದೆ.