Home ಜಿಲ್ಲೆ ಬಾಲ್ಯ ವಿವಾಹ ಮುಕ್ತ ಸಂಚಾರಿ ವಾಹನಕ್ಕೆ ಚಾಲನೆ

ಬಾಲ್ಯ ವಿವಾಹ ಮುಕ್ತ ಸಂಚಾರಿ ವಾಹನಕ್ಕೆ ಚಾಲನೆ

ಯಾದಗಿರಿ: ಫೆ.6:ಬಾಲ್ಯ ವಿವಾಹ ನಿರ್ಮೂಲನೆ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ “ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ – ಬಾಲ್ಯ ವಿವಾಹ ನಿಷೇಧ” ಅಭಿಯಾನದ ಅಂಗವಾಗಿ ಸಂಚಾರಿ ಜಾಗೃತಿ ವಾಹನಕ್ಕೆ ಯಾದಗಿರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರುಳಸಿದ್ದಾರಾಧ್ಯ ಎಚ್. ಜೆ. ಅವರು ಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ್ಯ ವಿವಾಹವು ಕಾನೂನುಬಾಹಿರವಾಗಿದ್ದು, ಸಮಾಜದ ಅಭಿವೃದ್ಧಿಗೆ ದೊಡ್ಡ ಅಡ್ಡಿಯಾಗಿದೆ. ಇದರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಈರಣ್ಣ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ, ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಅರುಣ್ ಚೌಗುಲೆ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರಾಹುಲ್ ರಾವ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀ ಮರಿಯಪ್ಪ ಉಪಸ್ಥಿತರಿದ್ದರು.

ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಆರ್.ಎಸ್. ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕರಾದ ಆನಂದ್ ರಾವ್, ಮಕ್ಕಳ ರಕ್ಷಣಾ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಪ್ರತಿನಿಧಿಗಳು, ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.