
ಬೀದರ್ ಅ ೩೧: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷಿತ ಬಾಲ್ಯ ನಿರ್ಮಾಣಕ್ಕೆ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ಶೋಷಣೆ ಅಥವಾ ಅನ್ಯಾಯಕ್ಕೆ ಒಳಗಾದಾಗ ಭಯಪಡದೆ ಸಂಬAಧಪಟ್ಟವರಿಗೆ ಮಾಹಿತಿ ನೀಡಬೇಕು ಎಂದು ಜೆಎಂಎಫ್ಸಿ ಎರಡನೇ ನ್ಯಾಯಾಲಯದ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಹೇಳಿದರು.
ನಗರದ ವಿದ್ಯಾಶ್ರೀ ಮಾದರಿ ಪ್ರಾಥಮಿಕ ಶಾಲೆ ಮತ್ತು ವಿದ್ಯಾನಿಧಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಸುರಕ್ಷಿತ ಬಾಲ್ಯ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಜಾರಿಯಲ್ಲಿರುವ ಪೋಕ್ಸೊ ( PಔಅSಔ ) ಕಾಯ್ದೆಯ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಿರಬೇಕು. ಮಕ್ಕಳಿಗೆ ತಮ್ಮ ಹಕ್ಕುಗಳು, ಸುರಕ್ಷತೆ ಹಾಗೂ ಕಾನೂನು ರಕ್ಷಣೆಯ ಕುರಿತು ತಿಳಿವಳಿಕೆ ನೀಡುವುದು ಅಗತ್ಯ. ಮಕ್ಕಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮುಕ್ತವಾಗಿ ಪೋಷಕರು ಮತ್ತು ಶಿಕ್ಷಕರೊಂದಿಗೆ ಹಂಚಿಕೊಳ್ಳಬೇಕು. ಮಕ್ಕಳಿಗೆ ನ್ಯಾಯ ದೊರಕಿಸಲು ಕಾನೂನು ಸೇವಾ ಪ್ರಾಧಿಕಾರದಿಂದ ಲಭ್ಯವಿರುವ ನೆರವಿನ ಬಗ್ಗೆಯೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಬೀದರ್ ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕರಾದ ಸಂಗಮೇಶ ಮಾತನಾಡಿ, ಮಕ್ಕಳ ಸುರಕ್ಷತೆ ಕೇವಲ ಕುಟುಂಬದ ಜವಾಬ್ದಾರಿಯಲ್ಲ; ಅದು ಇಡೀ ಸಮಾಜದ ಕರ್ತವ್ಯವಾಗಿದೆ. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ, ಶೋಷಣೆ ಹಾಗೂ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾರ್ವಜನಿಕರು ಜಾಗೃತರಾಗಬೇಕು. ಇಂತಹ ಘಟನೆಗಳು ಕಂಡುಬAದರೆ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.
ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಮೆಗೆ ತೊಡಗಿಸುವುದು ಅವರ ಭವಿಷ್ಯಕ್ಕೆ ಹಾನಿ ಉಂಟುಮಾಡುತ್ತದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ, ರಕ್ಷಣೆ ಮತ್ತು ಗೌರವಯುತ ಬದುಕು ದೊರೆಯಬೇಕು. ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವ ಮೂಲಕ ಅನ್ಯಾಯದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತುವ ಮನೋಭಾವ ಬೆಳೆಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ರಾಘವೇಂದ್ರ ಕುಲಕರ್ಣಿ ವಹಿಸಿದ್ದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ ಹುಗಾಡೆ ಕಾರ್ಯಕ್ರಮ ನಿರೂಪಿಸಿದರು.
ಮಕ್ಕಳ ಹಕ್ಕುಗಳು, ಪೋಕ್ಸೊ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ದೊರೆಯುವ ಕಾನೂನು ನೆರವಿನ ಕುರಿತು ನಡೆದ ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು.
ಅದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.






















