
ಬೆಂಗಳೂರು, ಮಾ. ೬- ಈ ಸಾಲಿನ ಬಜೆಟ್‌ನಲ್ಲಿ ಮಕ್ಕಳ ಕಾಳಜಿಗೆ ಆದ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಘೋಷಣೆ ಮಾಡಿದ್ದಾರೆ.
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುತ್ತಿರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲಣತಾಣದ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಬಳಕೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಇದರಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೂ ಅಡ್ಡಿಯಾಗಿದ್ದು, ಮಕ್ಕಳು ಸಾಮಾಜಿಕ ಜಾಲತಾಣಗಳ ವ್ಯಸನಕ್ಕೆ ಒಳಗಾಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಘೋಷಣೆ ಮಾಡಿದ್ದಾರೆ.
ಮಕ್ಕಳಿಗೆ ಶಾಲೆಯಲ್ಲಿ ಆನ್‌ಲೈನ್ ಕ್ಲಾಸ್‌ಗಳಲ್ಲೂ ಮೊಬೈಲ್ ಕೊಡಿಸಿದರೆ ಅದನ್ನು ಸೋಷಿಯಲ್ ಮೀಡಿಯಾಗೆ ಬಳಕೆ ಮಾಡುತ್ತಿದ್ದು, ಸೋಷಿಯಲ್ ಮಿಡಿಯಾಗೆ ತಮ್ಮದೇ ಲಾಗ್‌ಇನ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ೧೬ ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಲಾಗ್‌ಇನ್ ಮಾಡುವುದಕ್ಕೂ ಮುನ್ನ ವಯಸ್ಸಿನ ದೃಢೀಕರಣ ಮಾಡುವುದನ್ನು ಕಡ್ಡಾಯ ಮಾಡಲಾಗುತ್ತಿದೆ.

ಆನ್‌ಲೈನ್ ಗೇಮ್‌ಗಳು ಮತ್ಕು ರೀಲ್ಸ್‌ಗಳು ಕಿರು ವಿಡಿಯೋಗಳ ಗೀಳಿನಿಂದ ಮಕ್ಕಳು ಓದಿನಲ್ಲಿ ಹಿಂದುಳಿಯುತ್ತಿದ್ದು, ಇದನ್ನು ತಪ್ಪಿಸಿ ಮಕ್ಕಳು ಓದಿನತ್ತ ಹೆಚ್ಚಿನ ಚಿತ್ತ ಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ಜಾಲತಾಣ ಬಳಕೆಯನ್ನು ಮಕ್ಕಳಿಗೆ ನಿಷೇಧಿಸುವ ತೀರ್ಮಾನವನ್ನು ಕೈಗೊಂಡಿದೆ.
೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣವನ್ನು ನಿಷೇಧಿಸುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪೋಷಕರಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಶಿಕ್ಷಣ ತಜ್ಞರು, ಮನೋವೈದ್ಯರು ಸಹ ಸರ್ಕಾರದ ಈ ತೀರ್ಮಾನವನ್ನು ಶ್ಲಾಘಿಸಿದ್ದು, ಇದು ಮಕ್ಕಳ ಸೃಜನಶೀಲತೆ ಹೆಚ್ಚಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ರಾಜ್ಯದಲ್ಲಿ ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲಣವನ್ನು ನಿಷೇಧಿಸಬೇಕು ಎಂಬ ಕೂಗು ವ್ಯಾಪಕವಾಗಿತ್ತು. ಬಜೆಟ್ ಮುನ್ನವೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಮಕ್ಕಳಿಗೆ ಸಾಮಾಜಿಕ ಜಾಲತಾಣವನ್ನು ನಿಷೇಧಿಸಬೇಕು ಎಂಬ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬಜೆಟ್‌ನಲ್ಲಿ ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣವನ್ನು ನಿಷೇಧಿಸುವ ತೀರ್ಮಾನವನ್ನು ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.




























