
ಬೀದರ್: ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ಇಲ್ಲಿಯ ಅರುಣೋದಯ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಚಿಣ್ಣರು ಮೊಸರು ಗಡಿಗೆ ಒಡೆದು, ಬೆಣ್ಣೆ ಸವಿದು ಸಂತಸಪಟ್ಟರು.
100 ಮಕ್ಕಳು ಕೃಷ್ಣ ಹಾಗೂ ರಾಧೆ ವೇಷ ತೊಟ್ಟು ಎಲ್ಲರ ಚಿತ್ತ ತಮ್ಮತ್ತ ಸೆಳೆದರು. ನರ್ತನ ಮಾಡಿ, ಜೋಕಾಲಿ ಆಡಿದರು.
ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.






























