ಮಕ್ಕಳು ಪತಿ ಕೊಂದು, ಪತ್ನಿ ಆತ್ಮಹತ್ಯೆ ಯತ್ನ

ಬೆಂಗಳೂರು,ಸೆ.೧೪- ಸಾಲಬಾಧೆ ತಾಳಲಾರದೇ ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಪತ್ನಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಪತಿ ಶಿವು (೩೨), ಮಗಳು ಚಂದ್ರಕಳಾ (೧೧) ಮಗ ಉದಯ್ ಸೂರ್ಯ (೦೭) ಕೊಲೆಯಾದವರು. ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ ಮಾಡಿಕೊಂಡಿತ್ತು.


ಸಾಲ ಹೆಚ್ಚಾಗಿದ್ದರಿಂದ ದಂಪತಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಮಕ್ಕಳನ್ನೂ ಸಾಯಿಸುವ ನಿರ್ಧಾರ ಮಾಡಿದ್ದಾರೆ.
ಮೊದಲಿಗೆ ಗಂಡ ಮತ್ತು ಮಕ್ಕಳ ಕುತ್ತಿಗೆಯನ್ನ ವೇಲ್‌ನಿಂದ ಹೆಂಡತಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸದ್ಯ ಮಹಿಳೆಗೆ ಹೊಸಕೋಟೆ ಸರ್ಕಾರ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸುದ್ದಿ ತಿಳಿದ ತಕ್ಷಣವೇ ಹೊಸಕೋಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.