
ಬೆಂಗಳೂರು, ಮೇ. ೯-ನಾರ್ತ್ ಬೆಂಗಳೂರು ಎಜುಕೇಷನಲ್ ಟ್ರಸ್ಟ್ ಕಮ್ಮಗೊಂಡಹಳ್ಳಿಯ ಆಶ್ರಯದಲ್ಲಿ ನಡೆಯುತ್ತಿರುವ ಪೂರ್ಣ ಪ್ರಜ್ಞಾ ಅಕಾಡೆಮಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳಲ್ಲಿರುವ ಸೃಜನಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೇಸಿಗೆ ಶಿಬಿರವನ್ನು ನಡೆಸಲಾಯಿತು.ಶಿಬಿರದ ಮುಕ್ತಾಯ ಸಮಾರಂಭವನ್ನು ನಿನ್ನೆ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಆರ್.ಶಾಂತಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯದರ್ಶಿ ಡಾ.ಡಿ. ಎನ್.ಹರಿದಾಸ್ ಅವರು ಪ್ರಸ್ತಾವನೆ ನಡೆಸಿಕೊಟ್ಟರು.ಮುಖ್ಯ ಅತಿಥಿಗಳಾಗಿ. ಪ್ರಖ್ಯಾತ ಗಾಯಕರು ಹಾಗೂ ನಟರಾದ ಶಶಿಧರ್ ಕೋಟೆ ಅವರು ಆಗಮಿಸಿದ್ದರು.ಮಕ್ಕಳಿಗೆ ಪ್ರೋತ್ಸಾಹದ ನುಡಿಗಳನ್ನು ನುಡಿಯುವುದರ ಜೊತೆಗೆ ತಮ್ಮ ಸುಮಧುರ ಕಂಠದಿಂದ ಪ್ರೇಕ್ಷಕರ ಮನ ಮನರಂಜಿಸಿದರು.
ಬೇಸಿಗೆ ಶಿಬಿರದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.
ವೇದಿಕೆಯ ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಖಜಾಂಚಿಗಳಾದ ಜಿ.ರಾಜೇಂದ್ರ, ನಿರ್ದೇಶಕ ಬಿ.ಎಸ್.ಲಕ್ಷ್ಮೀಶ, ಎನ್‌ಬಿಇಟಿಯು ಪ್ರಾಂಶುಪಾಲರಾದ ಚಂದ್ರಪ್ಪ ಪಿಪಿಎ ಶಾಲೆಯ ಮುಖ್ಯೋಪಾಧ್ಯಾಯರಾದ ಜ್ಯೋತಿಶ್ರೀ. ಪಿ.ದೇಶಪಾಂಡೆ, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಹಾಜರಿದ್ದರು.


























