
ಗದಗ, ನ.19: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ, ಜಿಲ್ಲಾ ನ್ಯಾಯವಾದಿಗಳ ಸಂಘ, ಗದಗ, ಮಂಜು ಶಿಕ್ಷಣ ಸಂಸ್ಥೆ, ಬೆಟಗೇರಿ-ಗದಗ ಸಂಯುಕ್ತಾಶ್ರಯದಲ್ಲಿ ಮಂಜು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸಿ.ಎಸ್.ಶಿವನಗೌಡ್ರ ಉದ್ಘಾಟಿಸಿ ಮಾತನಾಡಿ ಇಂದಿನ ಮಕ್ಕಳೇ ದೇಶದ ಭವಿಷ್ಯವಾಗಿದ್ದು ವಿದ್ಯಾರ್ಥಿಗಳೆಲ್ಲಾ ಚೆನ್ನಾಗಿ ಅಭ್ಯಾಸ ಮಾಡಿ, ದೇಶದ ಒಳ್ಳೆಯ ನಾಗರಿಕರಾಗಿ ಬೆಳೆಯಬೇಕು. ಸರ್ಕಾರ ಉಚಿತವಾಗಿ ಶಿಕ್ಷಣ ಸೇರಿದಂತೆ ಹಲವು ಸೌಲಭ್ಯ ನೀಡುತ್ತಿದ್ದು, ಇದರ ಪ್ರಯೋಜನ ಪಡೆದು ಸಾಧನೆಯ ಹಾದಿಯಲ್ಲಿ ನಡೆಯಬೇಕು ಎಂದು ಕರೆ ನೀಡಿದರು.
ಮಂಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷತೆ ವಹಿಸಿದ ಶಂಕರಸಿಂಗ್ ಎಸ್ ರಜಪೂತ, ಅತಿಥಿಗಳಾಗಿ ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ, ಶ್ರೀಮತಿ ಸುವರ್ಣಾ ಅಕ್ಕಿ, ಪ್ಯಾನಲ್ ವಕೀಲರು, ಗದಗ, ವಿರೇಂದ್ರಸಿಂಗ್ ರಜಪೂತ, ವಿನಾಯಕಸಿಂಗ್ ರಜಪೂತ ಸೇರಿದಂತೆ ಎಲ್ಲಾ ಸಿಬ್ಬಂದಿ ಹಾಗೂ ಮಂಜು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಉಪಸ್ಥಿತರಿದ್ದರು.
























