
ಚಿತ್ತಾಪುರ: ಪಟ್ಟಣದ ಪುರಸಭೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಗೂ ಮಹಿಳಾ ಸಿಬ್ಬಂದಿ ಸೇರಿದಂತೆ ಹಲವರು ಪಾಲ್ಗೊಂಡು ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು.
ಕನ್ನಡ ಭಾಷೆಯು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾಗಿದ್ದು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ದೈನಂದಿನ ಜೀವನದಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕನ್ನಡದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಸಂದೇಶದೊAದಿಗೆ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಪುರಸಭೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






















