
ಸಂಜೆವಾಣಿ ವಾರ್ತೆ
ಬೀದರ್, ಆ ೨೨: ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿAಗ್ ಸೇರಿದಂತೆ ಸಾಂಪ್ರದಾಯಿಕ ವೃತ್ತಿಗಳಿಗೆ ಮಾತ್ರ ಸೀಮಿತವಾಗದೆ, ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಹಾಗೂ ಅಭಿರುಚಿಗೆ ಅನುಗುಣವಾಗಿ ಹೊಸ ಹಾಗೂ ಕಡಿಮೆ ಪರಿಚಿತ ವೃತ್ತಿ ಕ್ಷೇತ್ರಗಳನ್ನು ಅನ್ವೇಷಿಸಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಖ್ಯಾತ ಶೈಕ್ಷಣಿಕ ಸಲಹೆಗಾರ ಡಾ. ವೀರೇಂದ್ರ ಪಾಟೀಲ್ ಹೇಳಿದರು.
ಕೆಆರ್‌ಇ ಸೊಸೈಟಿಯ ಕರ್ನಾಟಕ ಪಪೂ ಕಾಲೇಜು, ಬೀದರ್ ವತಿಯಿಂದ ಡಾ. ದೇವರಾಜ ಅರಸು ಜಯಂತಿ ಅಂಗವಾಗಿ ಹಾಗೂ ವಿದ್ಯಾರ್ಥಿಗಳಲ್ಲಿ ವಿವಿಧ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ‘ಅಚಿಡಿeeಡಿ ಔಠಿಣioಟಿs – ಇxಠಿಟoಡಿe ಐesseಡಿ ಏಟಿoತಿಟಿ ಅಚಿಡಿeeಡಿs ಖಿoo’ ವಿಶೇಷ ವೃತ್ತಿ ಮಾರ್ಗದರ್ಶನ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಹೊಸ ಹಾಗೂ ಉದಯೋನ್ಮುಖ ವೃತ್ತಿ ಕ್ಷೇತ್ರಗಳು, ಅವುಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ, ಕೌಶಲ್ಯಗಳು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ಡಾ. ವೀರೇಂದ್ರ ಪಾಟೀಲ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸರಿಯಾದ ವೃತ್ತಿ ಆಯ್ಕೆ, ನಿರಂತರ ಕೌಶಲ್ಯಾಭಿವೃದ್ಧಿ, ತಂತ್ರಜ್ಞಾನ ಜ್ಞಾನ ಹಾಗೂ ಸಮರ್ಪಕ ಯೋಜನೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇತರರನ್ನು ಅನುಸರಿಸುವ ಬದಲು ತಮ್ಮ ಸಾಮರ್ಥ್ಯ ಮತ್ತು ಆಸಕ್ತಿಯನ್ನು ಗುರುತಿಸಿಕೊಂಡು ಸ್ವಂತ ಗುರಿಗೆ ತಕ್ಕ ವೃತ್ತಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೆಆರ್‌ಇ ಸೊಸೈಟಿಯ ನಿರ್ದೇಶಕ ಡಾ. ಧೂಳಪ್ಪ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ವೃತ್ತಿ ಮಾರ್ಗದರ್ಶನ ನೀಡುವುದು ಅತ್ಯಂತ ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ, ಭವಿಷ್ಯದ ಶಿಕ್ಷಣ ಮತ್ತು ವೃತ್ತಿ ನಿರ್ಧಾರಗಳನ್ನು ಸಮರ್ಥವಾಗಿ ಕೈಗೊಳ್ಳಲು ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಆರ್‌ಇ ಸೊಸೈಟಿಯ ಕಾರ್ಯದರ್ಶಿ ಸತೀಶ್ ಪಾಟೀಲ್ ಮಾತನಾಡಿ, ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ವೃತ್ತಿ ಜಾಗೃತಿ, ಕೌಶಲ್ಯಾಭಿವೃದ್ಧಿ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೆ ಇಂತಹ ಜ್ಞಾನವರ್ಧಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಆರ್‌ಇ ಸೊಸೈಟಿಯ ನಿರ್ದೇಶಕ ಬಿ. ಶಿವಶಂಕರ ಶೆಟ್ಕರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರು ಅತಿಥಿಗಳನ್ನು ಸ್ವಾಗತಿಸಿದರು. ಸಚಿನ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವೃತ್ತಿ ಕ್ಷೇತ್ರಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.





























