Home ಮುಖಪುಟ ಸುದ್ದಿ ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್ ಆತ್ಮಹತ್ಯೆ

ಬೆಂಗಳೂರು,ಏ.೧೦-ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ವಿಶೇಷ ತನಿಖಾ ತಂಡ(ಎಸ್ ಐಟಿ)ದ ತನಿಖೆಯಲ್ಲಿ ಪತ್ತೆಯಾಗಿದೆ.


ಆದಾಯ ತೆರಿಗೆ ಅಧಿಕಾರಿಗಳ ಒತ್ತಡಕ್ಕೆ ನೊಂದು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು.


ಎಸ್‌ಐಟಿ ತನಿಖೆಯ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಯ್ ಅದಕ್ಕಾಗಿ ಪಡೆಯುತ್ತಿದ್ದ ಚಿಕಿತ್ಸೆಯನ್ನು,ಕೆಲ ತಿಂಗಳಿನಿಂದ ನಿಲ್ಲಿಸಿದ್ದರು.


ಮೃತಪಡುವ ಒಂದು ತಿಂಗಳ ಹಿಂದೆಯಿಂದ ಮಾತ್ರೆ ಸೇವನೆ ಮಾಡುತ್ತಿರಲಿಲ್ಲ. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಗೆ ನಿಖರವಾದ ಕಾರಣ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಯಾವುದೇ ಒತ್ತಡವೂ ಕಾರಣವಲ್ಲ ಎನ್ನುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಈಗಾಗಲೇ ತನಿಖೆ ಪೂರ್ಣಗೊಂಡಿದ್ದು ಶೀಘ್ರವೇ ಎಸ್‌ಐಟಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.


ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ ೩೦ ರಂದು ರಿಚ್‌ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ವಿಚಾರಣೆಯ ಸಮಯದಲ್ಲಿ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.