
ಲಕ್ಷೆ÷್ಮÃಶ್ವರ, ಮೇ೨೯: ಬೇಸಿಗೆಯ ರಜೆ ಮುಗಿದು ಇನ್ನೇನು ೨೦೨೬_ ೨೭ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಿರಿಯ ಮತ್ತು ಹೆಣ್ಣುಮಕ್ಕಳ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರು ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಪಟ್ಟಣದ ಸರ್ಕಾರಿ ಹಿರಿಯ ಹೆಣ್ಣುಮಕ್ಕಳ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಬಸವರಾಜ್ ಕುಂಬಾರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ನಿನ್ನೆ ಶಾಲಾ ಕೊಠಡಿಗಳ ಸ್ವಚ್ಛತೆ ಆವರಣಗಳ ಸ್ವಚ್ಛತೆ ನೀರಿನ ಟ್ಯಾಂಕರ್ ಬಿಸಿಯೂಟದ ಅಡುಗೆ ಮನೆ ಅದರ ಪರಿಕರಗಳು ಶೌಚಾಲಯ ಮೂತ್ರಾಲಯ ಮತ್ತು ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡರು.
ಜೂನ್ ೧ ರಿಂದ ಶಾಲೆಗಳ ಪ್ರಾರಂಭೋತ್ಸವ ಜರಗಲಿದ್ದು ವಿದ್ಯಾರ್ಥಿಗಳ ದಾಖಲಾತಿ ಆಂದೋಲನ ಸೇತುಬಂಧ ಪರೀಕ್ಷೆಗಳು ಸೇರಿದಂತೆ ಮೊದಲ ದಿನವೇ ಶಾಲೆಗೆ ಬರುವ ಮಕ್ಕಳಿಗೆ ಶಾಲಾ ಸಮವಸ್ತç ಮತ್ತು ಪಠ್ಯಪುಸ್ತಕಗಳ ವಿತರಣೆಯನ್ನು ಮಾಡಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಮುಖ್ಯೋಪಾಧ್ಯಾಯರು ಹೇಳಿದರು.
ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್ಎಚ್ ನಾಯಕ ಅವರು ಶಿರಹಟ್ಟಿ ಮತ್ತು ಲಕ್ಷೆ÷್ಮÃಶ್ವರ ತಾಲೂಕಿನ ಎಲ್ಲಾ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಅನುದಾನಿತ ಶಾಲೆಗಳಲ್ಲಿ ಸಮವಸ್ತç ಪಠ್ಯಪುಸ್ತಕಗಳು ವಿತರಣೆಗೆ ಎಲ್ಲಾ ಕ್ರಮ ಕೈಗೊಂಡಿದ್ದು ಈಗಾಗಲೇ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

























