Home ಜಿಲ್ಲೆ ಬೆಂಗಳೂರು ಲಿಂಬಾವಳಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್‍ಯ

ಲಿಂಬಾವಳಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್‍ಯ

ಕೆ.ಆರ್.ಪುರ,ಮಾ.೨೯-ಮಹದೇವಪುರ ಕ್ಷೇತ್ರದ ಕಣ್ಣೂರು ಪಂಚಾಯತಿ ವ್ಯಾಪ್ತಿಯ ಹೊಸೂರು ಬಂಡೆ ಗೋಶಾಲೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ನೇತೃತ್ವದಲ್ಲಿ
ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಸೇವಾಕಾರ್ಯದ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ ಎಂದು ಹೇಳಿದರು.

ಇದೇ ಮಾರ್ಚ್ ೧೭ರಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರು ಪಂಚಾಯತ್ ವ್ಯಾಪ್ತಿಯ ಹೊಸೂರು ಬಂಡೆ ಗೋಶಾಲೆಯಲ್ಲಿ ಬೆಂಕಿ ಅವಘದ ನಡೆದಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಈ ಬಗ್ಗೆ ಈಗಾಗಲೇ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗೋಶಾಲೆಯ ಮುಂದಿನ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಗೋವುಗಳಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗೆ ನನ್ನ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಹೆಚ್ ಎಸ್ ಪಿಳ್ಳಪ್ಪ,ಕಣ್ಣೂರು ಪಂಚಾಯತಿ ಅಧ್ಯಕ್ಷ ಅಶೋಕ್, ಮುಖಂಡರಾದ ಚನ್ನಸಂದ್ರಚಂದ್ರಶೇಖರ್,ಕಿತ್ತಗನೂರು ಶ್ರೀನಿವಾಸ್,
ಮಾರುತಿಕುಮಾರ್,ಕಿಶೋರ್,
ಸುಂದರ್,ದೊಡ್ಡಣ್ಣ,ನಂಜುಂಡಪ್ಪ,ಮಹೇಶ್, ಕಾರ್ಯಕರ್ತರು ಹಾಗೂ ಗೋಪ್ರೇಮಿಗಳು ಉಪಸ್ಥಿತರಿದ್ದರು.