ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿನ ಅಂಗಡಿಗಳ ತೆರವು

ಕಲಬುರಗಿ,ಡಿ.9-ನ್ಯಾಯಾಲಯದ ಆದೇಶದ ಮೇರೆಗೆ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿರುವ ಅಂಗಡಿಗಳನ್ನು ತೆರವು ಮಾಡಲಾಯಿತು.
ಜೆಸಿಬಿ ಮೂಲಕ ಅಂಗಡಿಗಳನ್ನು ತೆರವು ಮಾಡಲಾಯಿತು. ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಪಾಲಿಕೆ ಅಧಿಕಾರಿ ಅಭಯ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ದಾಕ್ಷಾಯಿಣಿ ಎಸ್.ಅಪ್ಪ, ಸಂಘದ ಕಾರ್ಯದರ್ಶಿ ಬಸವರಾಜ ಎಸ್.ದೇಶಮುಖ ಅವರು ಅಂಗಡಿಗಳ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದರು.