Home ಜಿಲ್ಲೆ ತುಮಕೂರು ಸಿಎಲ್‌ಪಿ ನಾಯಕ ಡಿಕೆಶಿ ಆಯ್ಕೆ: ಕಾರ್ಯಕರ್ತರ ಹರ್ಷ

ಸಿಎಲ್‌ಪಿ ನಾಯಕ ಡಿಕೆಶಿ ಆಯ್ಕೆ: ಕಾರ್ಯಕರ್ತರ ಹರ್ಷ

ಕುಣಿಗಲ್, ಜೂ. ೧- ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ. ಕೆ. ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಬೇಗೂರು ನಾರಾಯಣ, ಪುರಸಭಾ ಮಾಜಿ ಅಧ್ಯಕ್ಷ ನಾಗೇಂದ್ರ, ಸುಂದರಕುಪ್ಪೆ ಪಾಪಣ್ಣ, ಬಿ.ಕೆ.ರಾಮಣ್ಣ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮತಿ, ಪ್ರಚಾರ ಸಮಿತಿ ಅಧ್ಯಕ್ಷ ಶಂಕರ್, ಬೇಗೂರು ಮೂರ್ತಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಸಂಭ್ರಮಿಸಿದರು.