
ಬೆಂಗಳೂರು, ಜು. ೧೮- ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಅಪೂರ್ಣವಾಗಿರುವಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇವರುಗಳು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.
ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಪುತ್ರನ ಅನಾರೋಗ್ಯದ ಕಾರಣ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದರು. ಹಾಗಾಗಿ ಸಂಪುಟ ವಿಸ್ತರಣೆ ಚರ್ಚೆ ಅಪೂರ್ಣವಾಗಿತ್ತು.
ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರು ದೆಹಲಿಗೆ ಬಂದಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಱಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರ ಜತೆ ಒಂದು ಸುತ್ತಿನ ಚರ್ಚೆ ನಡೆಸಿ ಖರ್ಗೆ ಅವರು ದೆಹಲಿಗೆ ಬಂದ ನಂತರ ಅವಶ್ಯಬಿದ್ದರೆ ನಿಮ್ಮನ್ನು ಕರೆಯುತ್ತೇನೆ ಎಂದು ಹೇಳಿದ್ದರು.
ಈ ಬೆಳವಗಣಿಗೆ ಹಿನ್ನೆಲೆಯಲ್ಲಿ ಸಂಪುಟು ವಿಸ್ತರಣೆ ಮಹೂರ್ತ ಮುಂದಕ್ಕೆ ಹೋಗಿತ್ತು.
ಬೆಂಗಳೂರಿನಲ್ಲೇ ಇರುವ ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಅವರ ನಿವಾಸದಲ್ಲಿಂದು ಬೆಳಗ್ಗೆ ಮುಖ್ಯಮಂತ್ರಿ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇವರುಗಳು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು
ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರ ಜತೆ ಆದಷ್ಟು ಬೇಗ ಮಾತನಾಡಿ, ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿ ಮಾಡಿ ಎಂದು ಈ ಇಬ್ಬರೂ ನಾಯಕರು ಖರ್ಗೆಯವರಲ್ಲಿ ಮನವಿ ಮಾಡಿದರು.
ಖರ್ಗೆ ಅವರು ಭಾನುವಾರದ ನಂತರ ದೆಹಲಿಗೆ ತೆರಳಲಿದ್ದ ಸೋಮವಾರ ಇಲ್ಲವೆ ಮಂಗಳವಾರ ಸಂಪುಟ ವಿಸ್ತರಣೆ ಬಗ್ಗೆ ರಾಹುಲ್‌ಗಾಂದಿ ಅವರೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ.































