
ಚನ್ನಮ್ಮನ ಕಿತ್ತೂರು,ನ25: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಎಂದು ಸಚಿವ ಎಚ್.ಕೆ ಪಾಟೀಲ ಹೇಳಿದರು.
ಚನ್ನಮ್ಮನ ಕಿತ್ತೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಈಗಾಗಲೇ ನಾಯಕತ್ವದ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಯಾರೂ ಇದರ ಕುರಿತು ಮಾತನಾಡಬಾರದು ಎಂದು ಎಆಯ್‍ಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಅವರ ಮಾತನ್ನು ನಾವು ಪಾಲನೆ ಮಾಡುತ್ತಿದ್ದೇವೆ. ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಹ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಿದ್ದೇವೆಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಆ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಿದ್ದೇವೆ. ಮಂತ್ರಿಮಂಡಳ ಬದಲಾವಣೆ ವಿಚಾರವಾಗಿ ಹೆಚ್ಚಿಗೆ ಮಾತನಾಡುವುದಿಲ್ಲವೆಂದರು.
ಈ ವೇಳೆ ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಮುಖಂಡರಾದ ಶ್ರೀಮತಿ ಲಕ್ಷ್ಮೀ ಇನಾಮದಾರ, ತವನಪ್ಪ ಅಷ್ಟಗಿ, ಮಹೇಂದ್ರ ಸಿಂಗ್, ವಾಯ್.ಬಿ.ಪಾಟೀಲ, ಅರವಿಂದ ಕಟಗಿ, ಕಿತ್ತೂರಿನ ಗಣ್ಯರು, ಉಪಸ್ಥಿತರಿದ್ದರು.

























