Home ಜಿಲ್ಲೆ ಬೆಂಗಳೂರು ಜೂ.೮ ತಾಲೂಕಿಗೆ ಸಿಎಂ-ಡಿಸಿರಿಂದ ಸ್ಥಳ ಪರಿಶೀಲನೆ

ಜೂ.೮ ತಾಲೂಕಿಗೆ ಸಿಎಂ-ಡಿಸಿರಿಂದ ಸ್ಥಳ ಪರಿಶೀಲನೆ

ಮಾಲೂರು ಮೇ ೨೮: ಮುಖ್ಯ ಮಂತ್ರಿಗಳು ಜೂನ್ ೮ರಂದು ತಾಲೂಕಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಎಂ.ರವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ತಾಲೂಕಿನ ಮಾಲೂರು ಬೆಂಗಳೂರು ರಸ್ತೆಯ ಮಡಿವಾಳ ಗೇಟ್ ಬಳಿ ಸ್ಥಳ ವೀಕ್ಷಣೆ ಮಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದವರು ಜೂನ್ ೮ರಂದು ಮುಖ್ಯಮಂತ್ರಿಗಳು ವಿವಿಧ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಣೆ ಕಾರ್ಯಕ್ರಮದ ಜೂನ್ ೮ ರಂದು ಮುಖ್ಯಮಂತ್ರಿಗಳ ಕಚೇರಿಯಿಂದ ಖಚಿತಪಡಿಸಿದ್ದು, ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿರುವುದರಿಂದ ಮಾಲೂರು ಬೆಂಗಳೂರು ರಸ್ತೆಯ ಹೊರವಲಯದಲ್ಲಿರುವ ಮಡಿವಾಳ ಗೇಟ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿದ್ದು, ಅದರಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.


ನಗರದಲ್ಲಿ ಮಳೆ ಆಗುತ್ತಿರುವುದರಿಂದ ಮಳೆಯನ್ನು ನೋಡಿಕೊಂಡು ನಗರ ಸಭೆಯ ಅಧಿಕಾರಿಗಳು ಮೈದಾನವನ್ನು ಸ್ವಚ್ಛಗೊಳಿಸಬೇಕು, ಕಾರ್ಯಕ್ರಮದ ಯಶಸ್ವಿಯಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಿತಿಗಳನ್ನು ಸಹ ಮಾಡಲಾಗಿದ್ದು, ಆಯಾಯ ಸಮಿತಿಯವರು ಅವರಿಗೆ ಒಪ್ಪಿಸಿರುವ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು ಎಂದ ಆವರು ಸ್ಥಳೀಯ ಶಾಸಕರಾದ ಕೆ.ವೈ.ನಂಜೇಗೌಡ ಅವರು ಕಾರ್ಯಕ್ರಮಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದು, ಅವರ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಮೂಲಭೂತ ಸವಲತ್ತುಗಳನ್ನು ಒದಗಿಸುವ ಕೆಲಸವೂ ಸಹ ಅಧಿಕಾರಿಗಳು ಮಾಡಬೇಕಾಗಿದೆ ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಡಿವೈಎಸ್ಪಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಬಾಗೇವಾಡಿ, ತಹಶೀಲ್ದಾರ್ ಎಂ.ವಿ.ರೂಪ, ತಾ.ಪಂ ಇಒ ವಿ ಕೃಷ್ಣಪ್ಪ, ಪೊಲೀಸ್ ಇನ್ಸ್ಪೆಕ್ಟರ್ ರಾಮಪ್ಪ ಗುತ್ತೇರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ನಗರಸಭೆ ಪೌರಾಯುಕ್ತ ಎಂಎಸ್ ಮಹದೇವ್, ನೀರು ಸರಬರಾಜು ನೈರ್ಮಲ್ಯ, ಇಲಾಖೆಯ ಜಬಿವುಲ್ಲಾ, ಕೃಷಿ ಇಲಾಖೆಯ ಸಾಯಕ ನಿರ್ದೇಶಕ ಮಂಜುನಾಥ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.