ಬಜೆಟ್‌ಗೆ ಸಿಎಂ ಸಿದ್ಧತೆ ಸಭೆ

ಬೆಂಗಳೂರು, ಫೆ. ೫- ವಿಧಾನ ಮಂಡಲ ಅಧಿವೇಶನ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಮುಂಗಡ ಪತ್ರ ಮಂಡನೆಗೆ ಕಸರತ್ತು ಆರಂಭಿಸಿದ್ದಾರೆ. ನಾಯಕತ್ವ ಗೊಂದಲ ಹಾಗೂ ಅಧಿಕಾರ ಹಂಚಿಕೆ ಕುರಿತಂತೆ ಕಾಂಗ್ರೆಸ್ ಪಾಳೆಯದಲ್ಲಿ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದರು.


ರೇಸ್‌ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು. ಪ್ರವಾಸೋದ್ಯಮ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ ಇಲಾಖೆ ಒಳಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.


ಮಾರ್ಚ್ ಮೊದಲವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.