
ಬೆಂಗಳೂರು, ಜೂ. ೨೯- ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಕಾವೇರಿ ಬಾಗಿನ ಅರ್ಪಿಸುವರು.
ಕಾವೇರಿ ಜಲಾಯನ ಪ್ರದೇಶದಲ್ಲಿ ಈ ಭಾರಿ ಉತ್ತಮ ಮಳೆಯಾಗಿ ೪೦ ವರ್ಷಗಳಲ್ಲೇ ಮೊದಲ ಬಾರಿಗೆ ಜೂನ್‌ನಲ್ಲೇ ಕೆಆರ್‌ಎಸ್ ಜಲಾಶಯ ಭರ್ತಿಯಾಗಿ ಇತಿಹಾಸ ಸೃಷ್ಠಿಯಾಗಿದೆ. ಕೆಆರ್‌ಎಸ್ ಜಲಾಶಯಕ್ಕೇ ಜೂನ್‌ನಲ್ಲೇ ತುಂಬಿರುವುದು ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ.
ಕೆಆರ್‌ಎಸ್ ಜಲಾಶಯ ಭರ್ತಿಯಾಗಿರುವುದರಿಂದ ವಾಡಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುಖ್ಯಮಂತ್ರಿ ಅವರ ಜತೆಗೂಡಿ ಕಾವೇರಿ ಬಾಗಿನ ಅರ್ಪಿಸುವರು.
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಆರ್‌ಎಸ್ ಜಲಾಶಯದಲ್ಲಿ ಕಾವೇರಿ ಬಾಗಿನ ಅರ್ಪಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ನಡೆದಿದ್ದು, ಜಲಾಶಯಕ್ಕೆ ಸುಣ್ಣ-ಬಣ್ಣ ಬಳಿಯುವ ಕಾರ್ಯಗಳು ನಡೆದಿದೆ.
ಜಲಾಶಯದ ಮೇಲೆ ಕನ್ನಡದ ಬಾವುಟವನ್ನು ಹಾಕಲಾಗಿದ್ದು, ಜಲಾಶಯದಲ್ಲಿ ಬಾಗಿನ ಅರ್ಪಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯದ ಆವರಣದಲ್ಲಿರುವ ಕಾವೇರಿಮಾತೆ ಪ್ರತಿಮೆಗೆ ಪೂಜೆ ಸಲ್ಲಿಸುವರು.
ನಾಳೆ ಬೆಳಿಗ್ಗೆ ೧೧.೩೦ರ ಅಭಿಜಿತ್ ಮುಹೂರ್ತದಲ್ಲಿ ಬಾಗಿನ ಅರ್ಪಣೆ ನಡೆಯಲಿದ್ದು, ಇದಕ್ಕಾಗಿ ೪೦ ಜತೆ ಬಾಗಿನಗಳನ್ನು ತಯಾರು ಮಾಡಲಾಗಿದೆ.