
ಕಲಬುರಗಿ,ಸೆ.6-ಮನೆ ಬೀಗ ಮುರಿದು 1.35 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು ಮಾಡಿರುವ ಘಟನೆ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ.
ಅಂಬಣ್ಣ ತಳವಾರ ಎಂಬುವವರ ಮನೆ ಬೀಗ ಮುರಿದು ಕಳ್ಳರು 15 ಗ್ರಾಂ.ಬಂಗಾರದ 3 ಉಂಗುರ, 30 ಸಾವಿರ ನಗದು ಸೇರಿ 1.35 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು ಮಾಡಿದ್ದಾರೆ.
ಈ ಸಂಬಂಧ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.