Home ಜಿಲ್ಲೆ ಕಲಬುರಗಿ 7.51 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು

7.51 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು

ಕಲಬುರಗಿ,ಜೂ.23-ಮನೆ ಬೀಗ ಮುರಿದು 7, 51, 400 ರೂ.ಮೌಲ್ಯದ ನಗನಾಣ್ಯ ಕಳವು ಮಾಡಿರುವ ಘಟನೆ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ಧರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ.
ಪ್ರೌಢಶಾಲಾ ಶಿಕ್ಷಕರಾದ ಸಿದ್ಧಾರೂಢ ಬೆಳಮಗಿ ಎಂಬುವವರ ಮನೆ ಬೀಗ ಮುರಿದು ಕಳ್ಳರು ಚಿನ್ನ, ಬೆಳ್ಳಿ ಮತ್ತು ನಗದು ದೋಚಿಕೊಂಡು ಹೋಗಿದ್ದಾರೆ.
ಮಗಳ ಮದುವೆ ಕಾರ್ಯಕ್ರಮ ಇದ್ದ ಪ್ರಯುಕ್ತ ಮನೆಗೆ ಬೀಗ ಹಾಕಿಕೊಂಡು ಕಲ್ಯಾಣ ಮಂಟಪಕ್ಕೆ ಹೋಗಿದ್ದು, ಈ ವೇಳೆ ಕಳ್ಳರು ಮನೆ ಬೀಗ ಮುರಿದು ಚಿನ್ನ, ಬೆಳ್ಳಿ ಮತ್ತು ನಗದು ಹಣ ಕಳವು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.