93 ಸಾವಿರ ರೂ.ಮೌಲ್ಯದ ನಗನಾಣ್ಯ ಕಳವು

ಕಲಬುರಗಿ,ನ.18-ಮನೆ ಬೀಗ ಮುರಿದು 93 ಸಾವಿರ ರೂ.ಮೌಲ್ಯದ ನಗನಾಣ್ಯ ಕಳವು ಮಾಡಿರುವ ಘಟನೆ ಶರಣಸಿರಸಗಿ ಗ್ರಾಮದಲ್ಲಿ ನಡೆದಿದೆ.
ಪರಮೇಶ್ವರ ಚಾಕಣೆ ಎಂಬುವವರ ಮನೆ ಬೀಗ ಮುರಿದು ಕಳ್ಳರು 60 ಸಾವಿರ ರೂ.ಮೌಲ್ಯದ 10 ಗ್ರಾಂ.ಬಂಗಾರದ ನೆಕ್ಲೆಸ್, 30 ಸಾವಿರ ರೂ.ಮೌಲ್ಯದ 5 ಗ್ರಾಂ.ಬಂಗಾರದ ಕಿವಿಯೋಲೆ ಮತ್ತು 3 ಸಾವಿರ ರೂ.ನಗದು ಸೇರಿ 93 ಸಾವಿರ ರೂ.ಮೌಲ್ಯದ ನಗನಾಣ್ಯವನ್ನು ದೋಚಿಕೊಂಡು ಹೋಗಿದ್ದಾರೆ.
ಈ ಸಂಬಂಧ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.