
ಬೆಂಗಳೂರು,ಡಿ.೧೯-ರಾಜ್ಯಾದ್ಯಂತ ಭಾರೀ ಚಳಿ ಮುಂದುವರೆದಿದೆ, ಮುಂದಿನ ಐದು ದಿನಗಳ ಕಾಲ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವು ಪ್ರದೇಶಗಳಲ್ಲಿ ತೀವ್ರ ಚಳಿ ಇರುವುದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಹಲವೆಡೆ ತಾಪಮಾನ ಕುಸಿಯುತ್ತಿದೆ. ಹವಾಮಾನ ಇಲಾಖೆ ಎರಡು ದಿನಗಳ ಕಾಲ ಶೀತಗಾಳಿಯ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ತಾಪಮಾನ ತೀವ್ರವಾಗಿ ಇಳಿಯುವ ನಿರೀಕ್ಷೆಯಿದೆ. ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ೯ ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ.
ಕೆಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ ಮತ್ತು ಮೈಸೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಮುಂದಿನ ಎರಡು ದಿನಗಳಲ್ಲಿ ಒಳನಾಡಿನ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ.
ನಂತರ ತಾಪಮಾನವು ೨ ರಿಂದ ೩ ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಸಲಹೆ ನೀಡಿದೆ.
ಬೆಂಗಳೂರಿನಲ್ಲಿ ತಾಪಮಾನವು ೧೨ಲಿಅ ಮತ್ತು ೧೪ಲಿಅ ನಡುವೆ ಇರಲಿದೆ. ಉತ್ತರ ಭಾರತದಿಂದ ಬರುವ ಒಣ ಗಾಳಿಯು ಶೀತ ಮಾರುತಕ್ಕೆ ಕಾರಣವಾಗಿದೆ. ಡಿಸೆಂಬರ್ ೧೭ ರ ನಂತರ ಶೀತ ಮಾರುತ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




























