
ಕಲಬುರಗಿ,ಸೆ.22-ಎರಡು ಬೈಕ್‍ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ನಗರ ಹೊರವಲಯದ ಕೇಂದ್ರ ಕಾರಾಗೃಹ ಹತ್ತಿರ ನಡೆದಿದೆ.
ಕೇಂದ್ರ ಕಾರಾಗೃಹ ಹತ್ತಿರವಿರುವ ಪೂರ್ಣಾನಂದ ಹೋಟೆಲ್‍ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನಾಗನಹಳ್ಳಿ ಗ್ರಾಮದ ಶಿವರಾಜ ತಂದೆ ಮಲ್ಲಿಕಾರ್ಜುನ ಹೊಸಮನಿ ಎಂಬುವವರು ಮೃತಪಟ್ಟಿದ್ದು, ಸಂಗಮೇಶ ಎಂಬುವವರಿಗೆ ಗಾಯಗಳಾಗಿವೆ. ಇವರು ಪೂರ್ಣಾನಂದ ಹೋಟೆಲ್‍ನಿಂದ ಕಲಬುರಗಿ ಕಡೆಗೆ ಬೈಕ್ ಮೇಲೆ ಹೋಗುತ್ತಿದ್ದಾಗ ಕಲಬುರಗಿ ಕಡೆಯಿಂದ ಜೇವರ್ಗಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವರಾಜ ಹೊಸಮನಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.