
ಕಲಬುರಗಿ,ನ.17-ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಿಂಚೋಳಿ ತಾಲೂಕಿನ ಜಿಲವರ್ಷ ಹಾಗೂ ಶಾದಿಪುರ ಗ್ರಾಮದ ನಡುವಿನ ರಸ್ತೆಯಲ್ಲಿ ರವಿವಾರ ಸಂಜೆ ನಡೆದಿದೆ.
ಶಾದಿಪುರ ಗ್ರಾಮದ ಶೌಕತ್ ಅಲಿ ನಿಜಾಮುದ್ದೀನ್ (60) ಎಂಬುವವರು ಮೃತಪಟ್ಟಿದ್ದಾರೆ. ಶಾದಿಪುರದ ಜವಾಹರ ನಗರ ತಾಂಡಾದ ಗೋಪಾಲ ಧರ್ಮು ಚವ್ಹಾಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಕುಂಚಾವರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















