Home ಮುಖಪುಟ ಸುದ್ದಿ ತ.ನಾಡಿಗೆ ನಿತ್ಯ ೩ ಸಾವಿರ ಕ್ಯುಸೆಕ್ ನೀರು ಹರಿಸಲು ಸಮಿತಿ ಸೂಚನೆ

ತ.ನಾಡಿಗೆ ನಿತ್ಯ ೩ ಸಾವಿರ ಕ್ಯುಸೆಕ್ ನೀರು ಹರಿಸಲು ಸಮಿತಿ ಸೂಚನೆ

ಹೊಸದಿಲ್ಲಿ, ಅ. ೨೩: ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ ಪ್ರತಿದಿನ ೩ ಸಾವಿರ ಕ್ಯುಸೆಕ್‌ನಂತೆ ಒಟ್ಟು ೩ ಟಿಎಂಸಿ ಅಡಿ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ಸೂಚನೆ ನೀಡಿದೆ.


ಶುಕ್ರವಾರ ನಡೆದ ಸಮಿತಿಯ ಸಭೆಯಲ್ಲಿ ಉಭಯ ರಾಜ್ಯಗಳ ನೀರಿನ ಲಭ್ಯತೆ ಹಾಗೂ ಸ್ಥಿತಗತಿಯ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಕರ್ನಾಟಕದ ಪ್ರತಿನಿಧಿಗಳು, “ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ತಗ್ಗಿದೆ.

ಈಗಾಗಲೇ ರಾಜ್ಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹರಿಸಲಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಮತ್ತಷ್ಟು ನೀರು ಬಿಡುವುದು ಕಷ್ಟ” ಎಂದು ತಮ್ಮ ಅಳಲು ತೋಡಿಕೊಂಡರು.
ಆದರೆ, ಉಭಯ ರಾಜ್ಯಗಳ ವಾದ-ಪ್ರತಿವಾದಗಳನ್ನು ಆಲಿಸಿದ ಸಮಿತಿಯು, ತಮಿಳುನಾಡಿನ ಬೇಡಿಕೆಯಂತೆ ಮುಂದಿನ ೧೫ ದಿನಗಳ ಅವಧಿಗೆ ಪ್ರತಿದಿನ ೩ ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ.