Home ಕ್ರೈಂ ಸುದ್ದಿಗಳು ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‍ಗಳ ಆರೋಪಇನ್‍ಸ್ಟಾಗ್ರಾಂ ಖಾತೆ ವಿರುದ್ಧ ದೂರು

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‍ಗಳ ಆರೋಪಇನ್‍ಸ್ಟಾಗ್ರಾಂ ಖಾತೆ ವಿರುದ್ಧ ದೂರು

ಜಮಖಂಡಿ, ಜೂ. 15:ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಕುಮಾರ ದಾನಕನ್ನವರ ಅವರು ಜಮಖಂಡಿ ನಗರ ಪೆÇಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ, “ಟಚಿm_soಟಿu_sheಣಣಥಿ” ಎಂಬ ಇನ್‍ಸ್ಟಾಗ್ರಾಂ ಖಾತೆಯ ಮೂಲಕ ಡಿ.ಕೆ. ಶಿವಕುಮಾರ ಅವರ ಬಗ್ಗೆ ಸುಳ್ಳು, ಆಧಾರರಹಿತ, ಅವಹೇಳನಕಾರಿ ಹಾಗೂ ಮಾನಹಾನಿಕರ ಪೆÇೀಸ್ಟ್‍ಗಳು, ವಿಡಿಯೋಗಳು, ರೀಲ್ಸ್ ಹಾಗೂ ಇತರೆ ವಿಷಯಗಳನ್ನು ಪ್ರಕಟಿಸಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಈ ರೀತಿಯ ವಿಷಯಗಳು ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವುದರ ಜೊತೆಗೆ ದ್ವೇಷ ಹಾಗೂ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇದ್ದು, ಜನಪ್ರತಿನಿಧಿಯ ಗೌರವ ಮತ್ತು ಸಾರ್ವಜನಿಕ ಚಿತ್ರಣಕ್ಕೆ ಧಕ್ಕೆ ತರುವ ಉದ್ದೇಶ ಹೊಂದಿರುವಂತೆ ಕಂಡುಬರುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್‍ಸ್ಟಾಗ್ರಾಂ ಖಾತೆಯ ವಿರುದ್ಧ ಪ್ರಕರಣ ದಾಖಲಿಸಿ, ಸಂಬಂಧಪಟ್ಟವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಜಮಖಂಡಿ ಶಹರ ಪೆÇಲೀಸ್ ಠಾಣೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪೆÇಲೀಸರು ದೂರು ಸ್ವೀಕರಿಸಿ ಪರಿಶೀಲನೆ ಆರಂಭಿಸಿದ್ದು, ತನಿಖೆಯ ನಂತರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು