ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಯಂತ್ರ ಕುಸಿತ

ಚಿಕ್ಕಬಳ್ಳಾಪುರ : ಮೇ. ೨೦.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಸರ್ಕಾರ ಆಗಿದ್ದು ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ವಕ್ತಾರ ಚಂದ್ರಶೇಖರ್ ತಿಳಿಸಿದರು.


ಭಾರತೀಯ ಜನತಾ ಪಕ್ಷ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕಾಗಿ ದೇಶದ ಅಭಿವೃದ್ಧಿಯನ್ನು ಕಡೆಗಣಿಸಿದ್ದು ಈ ಸರ್ಕಾರ ಒಂದು ಕ್ಷಣವು ಅಧಿಕಾರದಲ್ಲಿ ಇರಲು ಅನಾರಹವಾಗಿದೆ ಎಂದರು.


ರಾಜ್ಯದಲ್ಲಿ ಮತದಾರರು ಇದೆ ಕೊನೆಯ ಬಾರಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ ಈ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ರಾಜ್ಯದ ಮತದಾರರು ಮುಂದೆ ಎಂದೂ ಸಹ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದಿಲ್ಲ ಎಂದು ಆರೋಪಿಸಿದರು.


ರಾಜ್ಯದ ಗೃಹ ಮಂತ್ರಿ ಸಹ ಪರಮೇಶ್ವರ್ ರವರು ಸಹ ಅಸಮರ್ತರಾಗಿದ್ದು ಕಾನೂನು ಸುವ್ಯವಸ್ಥೆ ಕುಸಿದಿದ್ದು ಇದು ಒಲೈಕೆ ರಾಜಕಾರಣದಲ್ಲಿ ಒಂದು ವರ್ಗಕ್ಕೆ ಮಾತ್ರ ಅನುಕೂಲ ಮಾಡಿಕೊಡುವ ಸರ್ಕಾರವಾಗಿದೆ ಎಂದು ಆರೋಪಿಸಿದರು.


ರಾಜ್ಯದ ಜನ ತೆರಿಗೆಯ ಭಾರವನ್ನು ಹೊರಲಾರದೆ ನರಲಾಡುತ್ತಿದ್ದರೆ ಇವರು ನಾಚಿಕೆ ಇಲ್ಲದೆ ಸಾಧನ ಸಮಾವೇಶ ಮಾಡುತ್ತಿದ್ದಾರೆ ಇದು ಸಾದನ ಸಮಾವೇಶ ಅಲ್ಲ ವೈಫಲ್ಯದ ಸಮಾವೇಶ ಎಂದು ವ್ಯಂಗ್ಯವಾಡಿದರು


ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷಗಾದಿ ಸ್ಥಗಿತಗೊಂಡಿರುವ ಕಾರಣ ಬಿಜೆಪಿ ಬೈಲಾ ಪ್ರಕಾರ ಮುಂದಿನ ಮುಂದಿನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಆಗುವ ವರವಿಗೋ ಹಿಂದಿನ ಜಿಲ್ಲಾಧ್ಯಕ್ಷರೇ ಜಿಲ್ಲಾಧ್ಯಕ್ಷರಾಗಿ ಮುಂದುವರೆಯುವರು ಹಾಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗ ರಾಮಲಿಂಗಪ್ಪ ರವರೆ ಜಿಲ್ಲಾಧ್ಯಕ್ಷರು ಎಂದು ಅಧಿಕೃತವಾಗಿ ಪ್ರಕಟಿಸಿದರು.


ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ರವರು ಮಾತನಾಡಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ ಪಕ್ಷ ಉತ್ತಮವಾಗಿ ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ ಸ್ಥಳೀಯ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯಾತೀತ ಜನತಾದಳ ಮೈತ್ರಿಕೂಟದ ಅಭ್ಯರ್ಥಿಗಳ ಗೆಲ್ಲುತ್ತಿದ್ದು ಮುಂದಿನ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿಯೂ ಸಹ ಬಿಜೆಪಿ ಪಕ್ಷ ತನ್ನ ಸಾಧನೆಯನ್ನು ಉತ್ತಮಪಡಿಸಿಕೊಳ್ಳುತ್ತದೆ ಎಂದರು


ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರುಗಳಾದ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಬಿ.ಮುರಳಿ,ಜಿಲ್ಲಾ ಕಾರ್ಯದರ್ಶಿ ಆರ್.ಹೆಷ್.ಎನ್. ಅಶೋಕ್ ಸಹ ವಕ್ತಾರ ದೇವಸ್ಥಾನದ ಹೊಸಹಳ್ಳಿ ರಾಮಣ್ಣ,ಮಧುಚಂದ್ರ, ಒಳಗೊಂಡಂತೆ ಮತ್ತಿತರರು ಹಾಜರಿದ್ದರು