ನಿಗಧಿತ ಅವಧಿಯಲ್ಲಿ ಜಲಜೀವನ ಮೀಷನ್ ಕಾಮಗಾರಿಗಳು ಪೂರ್ಣಗೊಳಿಸಿ:ಸಿಇಓ ಡಾ.ಗಿರೀಶ್ ಬದೋಲೆ

ಬೀದರ. ಜು.19: ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್) ಗ್ರಾಮದ SETTING UP OF 3KLD FAECAL SLUDGE TREATMENT PLANT IN HANMANTHWADI(R) GRAM PANCHAYAT BASAVAKALYAN TALUK ಕಾಮಗಾರಿಯ ಸ್ಥಳ ಪರಿಶೀಲಿಸಿ ಕೂಡಲೆ ಅಂದಾಜು ಪತ್ರಿಕೆಯಂತೆ ಕಾಮಗಾರಿಯನ್ನು ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಹಾಯಕ ಬಸವಕಲ್ಯಾಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಕಾರ್ಯನಿರ್ವಾಹಕ ಅಭಿಯಂತರರಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೂಚಿಸಿದರು.
ಅವರು ಶುಕ್ರವಾರ ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್), ಮಲ್ಲಿಕಾರ್ಜುನ ವಾಡಿ ಹಾಗೂ ಹುಲಸೂರ ತಾಲ್ಲೂಕಿನ ಗೋರ್ಟಾ (ಬಿ) ಗ್ರಾಮಗಳ ಜಲ ಜಿವನ ಮೀಷನ್ ಕಾಮಗಾರಿಗಳ ಪರಿವೀಕ್ಷಣೆ ಮಾಡಿ ಮಾತನಾಡಿದರು.
ಮಲ್ಲಿಕಾರ್ಜುನ ವಾಡಿ ಗ್ರಾಮದ ಜಲ ಜಿವನ ಮೀಷನ್ ಕಾಮಗಾರಿ ಪರಿಶೀಲಿಸಿದ ಅವರು ಕಾಮಗಾರಿಯು ಈಗಾಗಲೆ ಹರ ಘರ ಜಲ್ ಗ್ರಾಮವೆಂದು ಘೋಷಿಸಿ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಲಾಗಿದೆ, ಕಾಮಗಾರಿಯ ಕಾರ್ಯಾಚರಣೆ ಮತ್ತು ನಿರ್ವಹಣೆಯು ಗ್ರಾಮ ಪಂಚಾಯತಿಯಿಂದ ನಿರ್ವಹಿಸಬೇಕಾಗಿರುವುದರಿಂದ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯು ಸಕ್ರಿಯಗೊಂಡು ನಿಗದಿತ ಸಮಯಕ್ಕೆ ಸಭೆಗಳನ್ನು ಜರುಗಿಸಿ ಯೋಜನೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯು ಉತ್ತಮರಿತಿಯಲ್ಲಿ ನಿರ್ವಹಿಸಬೇಕೆಂದು ಸಮಿತಿಯ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ತಿಳಿ ಹೇಳಿದರು.
ಹುಲಸೂರ ತಾಲ್ಲೂಕಿನ ಗೋರ್ಟಾ (ಬಿ) ಗ್ರಾಮದ ಜಲ ಜಿವನ ಮೀಷನ್ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯು ಪ್ರಗತಿಯಲ್ಲಿದ್ದು ಕಾಮಗಾರಿಯು ಗುಣಪಟ್ಟದಿಂದ ಹಾಗೂ ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಬಸವಕಲ್ಯಾಣ ಅವರಿಗೆ ಹಾಗೂ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲ್ಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಶುಲ್ಟಿ, ಬಸವಕಲ್ಯಾಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವರಾಜ ಪಲ್ಲೇರಿ, ಪತ್ರು ಜೇ. ಜಿಲ್ಲಾ ಯೋಜನಾ ವೈವಸ್ಥಾಪಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಬಸವಕಲ್ಯಾಣ ಶಾಖಾಧಿಕಾರಿಗಳು ಹಾಗೂ ಹಣಮಂತವಾಡಿ (ಆರ್), ಮಲ್ಲಿಕಾರ್ಜುನ ವಾಡಿ ಹಾಗೂ ಹುಲಸೂರ ತಾಲ್ಲೂಕಿನ ಗೋರ್ಟಾ (ಬಿ) ಗ್ರಾಮಗಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.