
ಚನ್ನಮ್ಮನ ಕಿತ್ತೂರು, ಅ 26: ಚನ್ನಮ್ಮನ ಸಮಾಧಿ ಸ್ಥಳ ರಾಷ್ಟ್ತೀಯ ಸ್ಮಾರಕವೆಂದು ಘೋಷಿಸಲು ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರ ಸರಕಾರಕ್ಕೆ ಪತ್ರ ಬರೆದು ವ?ರ್Àವಾದರೂ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ರಾಣಿಚನ್ನಮ್ಮನ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಣಿ ಚನ್ನಮ್ಮ ಬ್ರಿಟೀಷರ ವಿರುದ್ಧ ಹೋರಾಡಿ ಜಯಗಳಿಸಿದರು.
ವೀರವನಿತೆ ಚನ್ನಮ್ಮನ ಹೋರಾಟದ ಕುರಿತು ನಾಡಿಗೆ ತಿಳಿಸು ಸಲುವಾಗಿ 2017 ರಲ್ಲಿ ನಮ್ಮ ಸರಕಾರ ಕಿತ್ತೂರು ಚೆನ್ನಮ್ಮ ಜಯಂತಿ ಆರಂಭಿಸಿತು ಎಂಬುದು ಹೆಮ್ಮೆಯ ಸಂಗತಿ. ಚನ್ನಮ್ಮನ ಶೌರ್ಯ-ಸಾಹಸ ತಿಳಿಸಲು ಜಯಂತಿ ಆರಂಭಿಸಲಾಯಿತೇ ಹೊರತು ರಾಜಕೀಯ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಬಾಬಾಸಾಹೇಬ್ ಪಾಟೀಲ, ಚನ್ನಮ್ಮನ ಇತಿಹಾಸ ದೇಶದ ಜನತೆಗೆ ಮುಟ್ಟಿಸಲು ಪ್ರತಿವರ್ಷ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ. ಚನ್ನಮ್ಮನ ಕಿತ್ತೂರಿನ ಸಮಗ್ರ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಿದೆ. ಕಿತ್ತೂರಿನ ಐತಿಹಾಸಿಕ ಸ್ಥಳಗಳ ಜೀರ್ಣೊದ್ಧಾರಕ್ಕೆ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಒತ್ತಾಯಿಸಿದರು.
ಮಲಪ್ರಭಾ ಸಹಕಾರಿ ಕಾರ್ಖಾನೆ ದುಸ್ಥಿತಿಯಲ್ಲಿದ್ದು, ರೈತರ ಅನುಕೂಲಕ್ಕಾಗಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು ಹಾಗೂ ಕಿತ್ತೂರಿನ ಐತಿಹಾಸಿಕ ಸ್ಥಳಗಳನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಸಿ.ಎಂ.ತ್ಯಾಗರಾಜ್ ಸಮಾರೋಪ ನುಡಿಗಳನ್ನಾಡಿದರು. ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಚಿವ ಸತೀಶ್ ಜಾರಕಿಹೊಳಿ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಸಚೇತಕ ಸಲೀಂ ಅಹಮದ್, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ಶಾಸಕರಾದ ಎನ್.ಎಚ್.ಕೋನರೆಡ್ಡಿ, ಆಸಿಫ್(ರಾಜು) ಸೇಠ, ವಿಶ್ವಾಸ್ ವೈದ್ಯ, ವಿಪ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ವಾಯವ್ಯ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಹನಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆ ಅನು?Á್ಠನ ಸಮಿತಿ ಅಧ್ಯಕ್ಷ ವಿನಯ್ ನಾವಲಗಟ್ಟಿ, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಎಸ್ಪಿ ಡಾ.ಭೀಮಾಶಂಕರ್ ಗುಳೇದ, ಉಪವಿಭಾಗಾಧಿಖಾರಿ ಪ್ರವೀಣ ಜೈನ್, ಕನ್ನಡ ಮತ್ತು ನಸಂಸ್ಕøತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ ಕಲ್ಲನಗೌಡ ಪಾಟೀಲ, ಹನಮಂತ ಶಿರಹಟ್ಟಿ, ಬಸವರಾಜ ನಾಗರಾಳ, ತಾಪಂ ಇಓ ನಿಂಗಪ್ಪ ಮಸಳಿ, ಬಿಇಓ ಚನ್ನಬಸಪ್ಪ ತುಬಾಕಿ, ಡಿಸಿಸಿ ಬ್ಯಾಂಕ ನಿರ್ದೇಶಕ ನಾನಾಸಾಹೇಬ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿನಿ ಪಾಟೀಲ, ಪಪಂಅಧ್ಯಕ್ಷ ಜೈಸಿದ್ರಾಮ ಮಾರಿಹಾಳ, ಸರ್ವಸದಸ್ಯರು, ತಹಶೀಲ್ದಾರ ಮತ್ತು ಪಪಂ ಕಚೇರಿ ಸಿಬ್ಬಂದಿ ಭಾಗಿಯಾಗಿದ್ದರು.





























