Home ಜಿಲ್ಲೆ ಕಲಬುರಗಿ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ

ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ

ಕಲಬುರಗಿ: ನಗರದ ಮಕ್ತಂಪುರದಲ್ಲಿನ ಶ್ರೀ ಜಡೆಶಂಕರಲಿಂಗ ದೇವಸ್ಥಾನದಲ್ಲಿ ಜಿಲ್ಲಾ ಬಣಗಾರ ಸಮಾಜ, ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಮುಕ್ತಾಯ ಸಮಾರಂಭ ನಡೆಯಿತು.
ಭಾನುವಾರ ನಡೆದ ಕಾರ್ಯಕ್ರಮದ ಸಾನಿಧ್ಯವನ್ನು ಗುರುಬಸವ ಬೃಹನ್ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು, ಗದ್ದುಗೆ ಮಠದ ಶ್ರೀ ಚರಲಿಂಗ ಮಹಾಸ್ವಾಮಿಗಳು ವಹಿಸಿ, ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ರಾಜೇಶ್ ಬೈರಾಮಡಗಿ, ಪ್ರಧಾನ ಕಾರ್ಯದರ್ಶಿ ಮಹಾರುದ್ರ ಚೌದ್ರಿ, ದೇವಸ್ಥಾನ ಟ್ರಸ್ಟ್‍ನ ಅಧ್ಯಕ್ಷ ಆನಂದ ದಂಡೋತಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದು ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ನಂತರ ಮಹಾಪ್ರಸಾದ ವಿತರಿಸಲಾಯಿತು.
ಸೋಮವಾರದಂದು ಮಧ್ಯಾಹ್ನ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಮುಖ್ಯ ಬೀದಿಗಳಲ್ಲಿ ಪುರವಂತರ ಸೇವೆ, ಜನಪದ ಕಲಾಮೇಳದೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ಸಮಾಜದ ಹಾಗೂ ಟ್ರಸ್ಟ್‍ನ ಪದಾಧಿಕಾರಿಗಳು, ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.