
ಬೀದರ್: ಏ.೪:ದೇಶದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಸೇರಿ ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ ಬಾವಿದೊಡ್ಡಿ ತೀವ್ರವಾಗಿ ಖಂಡಿಸಿದ್ದಾರೆ.
ಸಿಲಿAಡರ್ ಅಭಾವದ ಕಾರಣ ವ್ಯಾಪಾರಿಗಳು ತೀವ್ರ ತೊಂದರೆಯಲ್ಲಿದ್ದಾರೆ. ಈ ನಡುವೆ ೧೯ ಕೆ.ಜಿ. ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. ೧೯೫.೫೦ ರಷ್ಟು ಹೆಚ್ಚಳ ಮಾಡಿರುವುದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆಯ್ದ ಪ್ರೀಮಿಯಂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೂಡ ಹೆಚ್ಚಳ ಮಾಡಿರುವುದು ಆಘಾತಕಾರಿ ಎಂದು ಹೇಳಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷದ ಕಾರಣ ನೀಡಿ ಬೆಲೆಯಲ್ಲಿ ಏರಿಕೆ ಮಾಡುತ್ತಿರುವುದು ಸರಿಯಲ್ಲ. ದೇಶದ ಜನರ ಹಿತ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಲಿರುವ ಮಾತುಗಳು ಕೇಳಿ ಬರುತ್ತಿವೆ. ವಿವಿಧ ಕಾರಣಗಳಿಂದ ಜನ ಸಂಕಷ್ಟದಲ್ಲಿರುವ ಕಾರಣ ವಿದ್ಯುತ್ ದರ ಏರಿಕೆ ಪ್ರಸ್ತಾವವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.




















