
ಆಳಂದ: ಪ್ರವಾದಿ ಮುಹಮ್ಮದ್ (ಸ) ಹಾಗೂ ಹಜರತ್ ಆಯೇμÁ ಸಿದ್ದಿಕಾ (ರ.ಅ) ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆಗಳು ಪ್ರಸಾರವಾಗಿವೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಹಾಗೂ ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಳಂದ ಪೀಪಲ್ ಫೆÇೀರಂ ಕಟಕಟ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ತಹಸೀಲ್ದಾರ್ ಅಣ್ಣಾರಾವ್ ಪಾಟೀಲ್ ಅವರ ಮೂಲಕ ಮನವಿ ಸಲ್ಲಿಸಿದರು.
ಈ ವೇಳೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ದೇಶದ ಲಕ್ಷಾಂತರ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿರುವ ಈ ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಮನವಿಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರಗೊಂಡಿರುವ ಪಾಡ್ಕ್ಯಾಸ್ಟ್ನಲ್ಲಿ ನಾಜಿಯಾ ಇಲಾಹಿ ಖಾನ್ ಅವರು ಪ್ರವಾದಿ ಮುಹಮ್ಮದ್ (ಸ) ಮತ್ತು ಹಜರತ್ ಆಯೇμÁ ಸಿದ್ದಿಕಾ (ರ.ಅ) ಅವರ ಕುರಿತು ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪಾಡ್ಕ್ಯಾಸ್ಟ್ “ದಿವ್ಯಾಸಿಂಗ್ 4043” ಹೆಸರಿನ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ಪ್ರಸಾರವಾಗಿದ್ದು, ಇದರಿಂದ ಮುಸ್ಲಿಂ ಸಮುದಾಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಯಾವುದೇ ಧರ್ಮದ ಪೂಜ್ಯ ವ್ಯಕ್ತಿಗಳು ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸುವ ಹೇಳಿಕೆಗಳು ಸಮಾಜದಲ್ಲಿ ಕೋಮು ಸಾಮರಸ್ಯ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಸಂವಿಧಾನ ಹಾಗೂ ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ, ಪಾಡ್ಕ್ಯಾಸ್ಟ್ನಲ್ಲಿ ಮಾಡಲಾದ ಹೇಳಿಕೆಗಳ ಕುರಿತು ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತನಿಖೆಯಲ್ಲಿ ಭಾರತದ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಅಪರಾಧ ನಡೆದಿರುವುದು ಕಂಡುಬಂದಲ್ಲಿ, ಕಾನೂನು ಪ್ರಕ್ರಿಯೆ ಅನುಸರಿಸಿ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಲ್ಲದೆ, ಸಾರ್ವಜನಿಕ ಶಾಂತಿ, ಕೋಮು ಸೌಹಾರ್ದತೆ ಹಾಗೂ ಎಲ್ಲಾ ಧರ್ಮಗಳ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ವಿಷಯಗಳ ಮತ್ತಷ್ಟು ಪ್ರಸಾರವನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಘಟಕದ ಹಿರಿಯ ಕಿರಿಯ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.






























