
ಕೋಲಾರ, ಆ,೧೭-: ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ರಾಮಲೀಲಾ ಮೈದಾನವನ್ನು ಗೋಮೂತ್ರ ಹಾಕಿ ಶುದ್ದೀಕರಿಸಿರುವ ಘಟನೆ ಖಂಡನೀಯವಾಗಿದ್ದು ಎಂದು ಕಾಂಗ್ರಸ್ ಎಸ್ಸಿ ಘಟಕದ ಮುಖಂಡ ಲಕ್ಷ್ಮೀಸಾಗರ ಜಿ. ಸುನಿಲ್ ಕುಮಾರ್ ತಿಳಿಸಿದ್ದಾರ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಸ್ವಾತಂತ್ರ್ಯ ಬಂದು ೮೦ ವರ್ಷಗಳಾದರೂ ದಲಿತ ಸಮುದಾಯದ ಹಿರಿಯ ನಾಯಕ ಹಾಗೂ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಭಾಷಣ ಮಾಡಿದ ಸ್ಥಳವನ್ನು ಗೋಮೂತ್ರದಿಂದ ಶುದ್ಧಕರಿಸುವಂತಹ ವಿಕೃತ ಮನಸ್ಥಿತಿ ಇರುವುದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಇಂತಹ ಕೃತ್ಯ ಎಸಗಿದವರ ವಿರುದ್ಧ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದಲಿತರಿಗ ನಿಜವಾದ ಗೌರವ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ನೀಡಲು ಕಾಂಗ್ರಸ್ ಪಕ್ಷ ಬದ್ಧವಾಗಿದೆ. ದಲಿತರ ಹಕ್ಕು, ಶಿಕ್ಷಣ, ಉದ್ಯೋಗ ಹಾಗೂ ರಾಜಕಯ ಪ್ರಾತಿನಿಧ್ಯಕ್ಕಾಗಿ ಕಾಂಗ್ರಸ್ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಆದರ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ದಲಿತರನ್ನು ಕೇವಲ ಮತಬ್ಯಾಂಕ್‌ನಂತೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಸಾಮಾಜಿಕ ಸಮಾನತೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಯಾವುದೇ ವ್ಯಕ್ತಿಯ ಜಾತಿ ಅಥವಾ ಸಾಮಾಜಿಕ ಹಿನ್ನಲೆಯನ್ನು ಆಧರಿಸಿ ಅವಮಾನಿಸುವ ಕೃತ್ಯಗಳಿಗ ಅವಕಾಶ ನೀಡಬಾರದು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ಸಾಮಾಜಿಕ ಸಾಮರಸ್ಯಕ್ಕ ಧಕ್ಕ ತರುವ ಯಾವುದೇ ರೀತಿಯ ಘಟನೆಗಳಿಗ ಅವಕಾಶ ನೀಡದೆ, ಎಲ್ಲ ಸಮುದಾಯಗಳ ಗೌರವ ಮತ್ತು ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.
































